Site icon PowerTV

ರಾಮನ ಹೆಸರು, ರಾವಣ ರಾಜಕೀಯ : ಹೆಚ್ಡಿಕೆ

ಬೆಂಗಳೂರು : ಬಿಜೆಪಿ ಸರ್ಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ?ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಅಧಿಕೃತ ಟ್ವಿಟ್ಟರ್​​ ಖಾತೆಯಲ್ಲಿ ಪೋಸ್ಟ್​​ ಮಾಡುವ ಮೂಲಕ ಪ್ರತಿಕ್ರಿಯಿಸಿದ ಅವರು,  ಭಾಷಣ ಒಂದು, ರಾಜಕಾರಣ ಇನ್ನೊಂದು!!’, ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ.5 ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ..? ಇದು ನ್ಯಾಯವೇ?’ ಎಂದು ಪ್ರಶ್ನಿಸಿದ್ದಾರೆ.

ಇನ್ನು ಸೋಲು ಖಚಿತ ಎಂದು ಗೊತ್ತಿದ್ದರೂ ಮನ್ಸೂರ್ ಖಾನ್ ಅವರನ್ನು ಬಲಿಪೀಠದ ಮುಂದೆ ನಿಲ್ಲಿಸಿದ್ದಿರಿ. ಏನಿದರ ಹಕೀಕತ್ತು? ‘ರಾಮನ ಹೆಸರು, ರಾವಣ ರಾಜಕೀಯ!! ನಿಮಗೆ ನೀವೇ ಸಾಟಿ. ಜಾತ್ಯತೀತತೆಯ ಸೋಗು ಹಾಕಿಕೊಂಡು ಪೋಸು ಕೊಡುವ ಆಸಾಮಿ, ಜಾತಿಗೊಂದು ಸಮಾವೇಶ ನಡೆಸಿಕೊಂಡು ಅಲ್ಪಸಂಖ್ಯಾತ ವ್ಯಕ್ತಿಯನ್ನು 2ನೇ ಅಭ್ಯರ್ಥಿ ಮಾಡಿದ ಒಳಗುಟ್ಟು ಏನು? ಆಪರೇಶನ್ ಕಮಲದ ಅಮಲು ಇನ್ನೂ ಇಳಿದಿಲ್ಲವೆ?’ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

Exit mobile version