Site icon PowerTV

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು

ಶಿವಮೊಗ್ಗ : ಪ್ರೀತಿಗೆ ಮನೆಯವರ ವಿರೋಧ ಹಿನ್ನೆಲೆಯಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ

ಸುಧಾ, ಪ್ರವೀಣ್ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳಾಗಿದ್ದು, ಇಬ್ಬರು ಕಳೆದ 6 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಸುಧಾ ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿದ್ದು, ಪ್ರವೀಣ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಮೂಲದವನಾಗಿದ್ದಾನೆ.

ಆತ್ಮಹತ್ಯೆಗೆ ಯತ್ನಿಸಿದ ಸುಧಾ ತೀರ್ಥಹಳ್ಳಿ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿದ್ದಾರೆ, ಪ್ರವೀಣ, ಅರಣ್ಯ ಇಲಾಖೆಯಲ್ಲಿ ನೌಕರರಾಗಿದ್ದು, ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಬಳಿಕ ಮನೆಯವರ ಒಪ್ಪಿಗೆಯನ್ನು ಪಡೆದುಕೊಳ್ಳಲು ತೆರಳಿದಾಗ ಮದುವೆಗೆ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಇದರಿಂದಲೇ ಆತ್ಮಹತ್ಯೆಗೆ ಯತ್ನಮಾಡಲಾಗಿದೆ ಎಂದು ತಿಳಿದು ಬಂದಿದೆ. ವಿಷ ಸೇವಿಸಿದ ಪ್ರೇಮಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಭದ್ರಾವತಿ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾ್ಗಿದೆ.

Exit mobile version