Site icon PowerTV

ಶಿಕ್ಷಣ ಸಚಿವರ ಮನೆಗೆ ಮುತ್ತಿಗೆ ಹಾಕಿದ NSUI

ತುಮಕೂರು : ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನೇಮಕ ವಿರೋಧಿಸಿ ತುಮಕೂರಿನಲ್ಲಿ ಶಿಕ್ಷಣ ಸಚಿವರ ಮನೆಗೆ ಎನ್‌ಎಸ್‌ಯುಐ ( NSUI )ಅವರು ಮುತ್ತಿಗೆ ಹಾಕಿದ್ದಾರೆ.

ತುಮಕೂರು ಜಿಲ್ಲೆ ತಿಪಟೂರಿನ ನಗರದಲ್ಲಿರುವ ಸಚಿವರ ಮನೆಗೆ ಇಂದು NSUI ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಮುತ್ತಿಗೆ ಹಾಕಿಲು ಯತ್ನಿಸಿದ್ದಾರೆ.

ಪಠ್ಯ ಪುಸ್ತಕ ವಿಚಾರವಾಗಿ ಸಚಿವರ ಮನೆಗೆ ಮುತ್ತಿಗೆ ಹಾಕಿದ NSUI. ಪಠ್ಯದಲ್ಲಿ ಕುವೆಂಪು ಅವರನ್ನು ಅವಮಾನ ಮಾಡಿದ್ದಾರೆ ಎಂಬ ಆರೋಪ ಹಿನ್ನೆಲೆ  ಮುತ್ತಿಗೆ ಹಾಕಲು ಯತ್ನಿಸಿದ ಎನ್ಎಸ್‌ಯುಐ ಕಾರ್ಯಕರ್ತರನ್ನ  ಪೊಲೀಸರು ಬಂಧಿಸಿದ್ದಾರೆ.

ಅಲ್ಲದೇ ಬಿ.ಸಿ.ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಯನ್ನು ನಡೆಸಿದರು. ಕೋಮುವಾದಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಪ್ರತಿಭಟನಾಕಾರರಿಂದ ಘೋಷಣೆ ಕೂಗಲಾಯಿತು.

Exit mobile version