Site icon PowerTV

50 ದಿನ ಪೂರೈಸಿದ KGF- ಸಿನಿಮಾ

ರಾಕಿಂಗ್ ಸ್ಟಾರ್ ಯಶ್ & ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ಬಂದ KGF -2 ಸಿನಿಮಾ ಇದೀಗ ಒಟಿಟಿಯಲ್ಲಿ ಸ್ಟ್ರೀಮಿಂಗ್‌ಗೆ ಸಜ್ಜಾಗಿದೆ. ಈಗಾಗಲೇ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿರುವ ಕೆಜಿಎಫ್-2 ಇದೀಗ ಒಟಿಟಿಯಲ್ಲೂ ದಾಖಲೆ ಬರೆಯಲು ಸಿದ್ದವಾಗಿದೆ.

ಕೆಜಿಎಫ್-2 ಸಿನಿಮಾ ನಾಳೆಯಿಂದ ಒಟಿಟಿಯಲ್ಲಿ ಸ್ಟ್ರೀಮಿಂಗ್ ಪ್ರಾರಂಭ ಮಾಡಲಿದೆ. ಅಲ್ಲದೇ, ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗಲಿದ್ದು, ಸದ್ಯ ಎಲ್ಲಾ ಭಾಷೆಯಲ್ಲೂ ಸಿನಿಮಾ ಲಭ್ಯವಿರಲಿದೆ.
ಮಹತ್ವದ ವಿಚಾರ ಅಂದ್ರೆ ಯಶಸ್ವಿ 50 ದಿನ ಪೂರೈಸಿದ ಕನ್ನಡದ ಮಾಸ್ಟರ್ ಪೀಸ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ..ಭಾರತದ 390 ಹಾಗೂ ಪ್ರಪಂಚದ 10ಕ್ಕೂ ಅಧಿಕ ಸೆಂಟರ್ ಗಳಲ್ಲಿ 50ದಿನ ಪೂರೈಸಿದೆ. ಇನ್ನು, KGF-2 ಅರ್ಧ ಶತದಿನೋತ್ಸವಕ್ಕೆ ಚಿತ್ರತಂಡ ಧನ್ಯವಾದ ತಿಳಿಸಿದೆ.

Exit mobile version