Site icon PowerTV

ಹಿಜಾಬ್‌ಧಾರಿ 6 ವಿದ್ಯಾರ್ಥಿನಿಯರು ಸಸ್ಪೆಂಡ್

ಮಂಗಳೂರು: ಹಿಜಾಬ್ ಧರಿಸಿ ಶಾಲಾ- ಕಾಲೇಜಿಗೆ ಆಗಮಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಆದರೂ ಮುಸ್ಲಿಂ ಸಮುದಾಯದ ಕೆಲ ವಿದ್ಯಾ ರ್ಥಿನಿಯರು ಹಿಜಾಬ್ ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. ಹೀಗೆ ಸತತ ಸೂಚನೆ ಬಳಿಕವೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತಿದ್ದ ಆರು ವಿದ್ಯಾರ್ಥಿನಿಯರು ಅಮಾನತುಗೊಂಡಿದ್ದಾರೆ.

ಉಪನ್ಯಾಸಕರ ಸಭೆಯಲ್ಲಿ ಒಮ್ಮತದ ನಿರ್ಧಾರದ ಬಳಿಕ ವಿದ್ಯಾರ್ಥಿನಿಯರನ್ನ ಅಮಾನತುಗೊಳಿಸಲಾಗಿದೆ. ಈ 6 ಮಂದಿ ವಿದ್ಯಾರ್ಥಿನಿಯರು ನಿತ್ಯ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದರು. ಹಿಜಾಬ್ ಧರಿಸಿದ್ದಕ್ಕೆ ಇತರೆ ವಿದ್ಯಾರ್ಥಿಗಳು ಅಸಮಾಧಾನಗೊಂಡಿದ್ದರು. ಈ ವೇಳೆ ಕಾಲೇಜಿನಲ್ಲಿ ಸಂಘರ್ಷವಾಗುವ ಸಾಧ್ಯತೆ ಹಿನ್ನೆಲೆ ಸಭೆ ನಡೆಸಿ ವಿದ್ಯಾರ್ಥಿನಿಯರನ್ನ ಸಸ್ಪೆಂಡ್ ಮಾಡಲಾಗಿದೆ.

Exit mobile version