Site icon PowerTV

ಆರೋಗ್ಯ ಸಚಿವ ಸುಧಾಕರ್​​ಗೆ ಕೊರೋನಾ

ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ. ನಿನ್ನೆಯಷ್ಟೇ
ವಿದೇಶದಿಂದ ವಾಪಸ್ಸಾಗಿದ್ದ ಆರೋಗ್ಯ ಸಚಿವರು, ಕೊವಿಡ್ ಟೆಸ್ಟ್​​​ಗೆ ಒಳಗಾಗಿದ್ದರು.ಅದರಂತೆ ಬಂದ ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದರಂತೆ ಅವರು ಹೋಮ್ ಐಸೋಲೇಷನ್ ಆಗಿದ್ದಾರೆ..

ಈ ಕುರಿತು ಟ್ವೀಟ್ ಮಾಡಿದ ಸಚಿವ ಸುಧಾಕರ್, ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್​​​ನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.

ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು, ಹೋಮ್ ಐಸೋಲೇಷನ್ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೊವಿಡ್ ತಪಾಸಣೆಗೆ ಒಳಗಾಗಿ ಎಂದು ಮನವಿಮಾಡುತ್ತೇನೆ ಎಂದು ಹೇಳಿದ್ದಾರೆ.

Exit mobile version