Site icon PowerTV

OTT ಲಗ್ಗೆ ಇಟ್ಟ ‘ಕೆಜಿಎಫ್ 2

ಯಶ್ ನಟನೆಯ ಕೆಜಿಎಫ್ 2′ ಬಾಕ್ಸಾಫೀಸ್‌ನಲ್ಲಿ ಭರ್ಜರಿ ದಾಖಲೆ ಮಾಡಿ, 50 ದಿನಗಳನ್ನು ಪೂರೈಸಿದೆ. ಈಗಲೂ ಚಿತ್ರಮಂದಿರಕ್ಕೆ ತೆರಳಿ ಸಿನಿಮಾ ವೀಕ್ಷಿಸುವವರ ಸಂಖ್ಯೆ ಕಡಿಮೆಯಾಗಿಲ್ಲ. ಈ ಬೆನ್ನಲ್ಲೇ ಕೆಜಿಎಫ್ 2′ OTTಗೆ ಲಗ್ಗೆ ಇಟ್ಟಿದೆ. ಇದೀಗ OTTಯಲ್ಲಿ ಯಶ್ ಸಿನಿಮಾ ರಿಲೀಸ್ ಆಗಿದೆ.

ಪ್ರಶಾಂತ್ ನೀಲ್ ಮತ್ತು ಯಶ್ ಕಾಂಬಿನೇಷನ್ ಚಿತ್ರ `ಕೆಜಿಎಫ್ 2′ 50 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಅಮೆಜಾನ್ ಪ್ರೈಮ್ ಸದಸ್ಯರು ಕನ್ನಡ,ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ಕೆಜಿಎಫ್ 2′ ಚಿತ್ರವನ್ನ ಹೆಚ್ಚುವರಿ ವೆಚ್ಚವಿಲ್ಲದೇ ವೀಕ್ಷಿಸಬಹುದಾಗಿದೆ. ಮಧ್ಯರಾತ್ರಿ 12 ಗಂಟೆಯಿಂದ ಚಿತ್ರ ವೀಕ್ಷಣೆಗೆ ಲಭ್ಯವಾಗಿದೆ.

ಇನ್ನು ನ್ಯಾಷನಲ್ ಸ್ಟಾರ್ ಯಶ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಸಂಜಯ್ ದತ್ ನಟಿಸಿರುವ ಕೆಜಿಎಫ್ 2′ ಈಗಾಗಲೇ ಒಟ್ಟು 1240.9 ಕೋಟಿ ಗಳಿಸಿ, 1250 ಕೋಟಿ ಗಳಿಸುವತ್ತ ಮುನ್ನುಗ್ಗುತ್ತಿದೆ. ಹಿಂದಿ ಬಾಕ್ಸಾಫೀಸ್‌ನಲ್ಲಿ 430 ಕೋಟಿಗೂ ಅಧಿಕ ಕಲೆಕ್ಷನ್ ಮಾಡುತ್ತಿದೆ. ಒಟ್ಟಿನಲ್ಲಿ ಯಶ್ ಸಿನಿಮಾ ನೋಡುವವರ ಸಂಖ್ಯೆ ಜಾಸ್ತಿಯಾಗುತ್ತಿದೆ ವಿನಃ ಕಮ್ಮಿಯಾಗುತ್ತಿಲ್ಲ.‌

Exit mobile version