Site icon PowerTV

ಕಾಂಗ್ರೆಸ್​​ ದಲಿತರನ್ನು ಸಿಎಂ ಮಾಡಲ್ಲ : ಬಿಜೆಪಿ

ಬೆಂಗಳೂರು : ದಲಿತ ನಾಯಕನೋರ್ವ ಸಿಎಂ ಆಗುತ್ತಾರೆ ಎನ್ನುವ ಭಯ ನಿಮ್ಮಲ್ಲಿ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಮಾಡಿತೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರಣಿ ಟ್ವಿಟ್​​ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಮುಂದೆ ನೀವು ಸಿಎಂ ಆಗಲು ನಾವು ಸಹಕರಿಸುತ್ತೇವೆ’ ಎಂದು ಖರ್ಗೆ ಅವರಿಗೆ ಜೆಡಿಎಸ್‌ ಹೇಳಿರೋದು ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರಿಗೆ ಬರಸಿಡಿಲು ಬಡಿದಂತಾಗಿದೆ. 2013 ರಲ್ಲಿ ದಲಿತ ನಾಯಕ ಸಿಎಂ ಆಗುವುದನ್ನು ತಪ್ಪಿಸಿದ ಕಾಂಗ್ರೆಸ್‌ 2023ಕ್ಕೂ ಅದೇ ತಂತ್ರ ಅನುಸರಿಸುತ್ತಿದೆ. ದಲಿತ ನಾಯಕರೆಂದರೆ ಏಕೆ ಇಷ್ಟು ಅಸಹನೆ? ಎಂದು ಮತ್ತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಗುಡುಗಿದೆ.

ಈ ಕುರಿತು ಸರಣಿ ಟ್ವಿಟ್ ಮಾಡಿದ್ದು, ದಲಿತ ನಾಯಕ ಖರ್ಗೆ ಅವರ ಮೇಲುಗೈ ಆಗುತ್ತದೆ ಎಂಬ ಭಯದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರು ಹೊಂದಾಣಿಕೆಯ ನಾಟಕ ಮಾಡುತ್ತಿದ್ದಾರೆ. ದಲಿತ ನಾಯಕನೋರ್ವ ಸಿಎಂ ಆಗುತ್ತಾರೆ ಎನ್ನುವ ಭಯ ನಿಮ್ಮಲ್ಲಿ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಮಾಡಿತೆ? ನಮ್ಮದು ದಲಿತಪರ ಪಕ್ಷ ಎನ್ನುವ ಕಾಂಗ್ರೆಸ್‌, ವಾಸ್ತವದಲ್ಲಿ ದಲಿತ ಸಮುದಾಯವನ್ನು ಮೇಲೇರಲು ಬಿಡುವುದೇ ಇಲ್ಲ. ಸಿಎಂ ಆಗಲಿದ್ದ ಪರಮೇಶ್ವರ್‌ ಅವರನ್ನು ಸೋಲಿಸಿದರು, ನಂತರ ಡಿಸಿಎಂ ಸ್ಥಾನದಿಂದಲೂ ಕಿತ್ತೆಸೆದರು, ಈಗ ಇವರ ದೃಷ್ಟಿ ಖರ್ಗೆ ಮೇಲೆ! ಎಂದು ಪ್ರಶ್ನಿಸಿದ್ದಾರೆ.

Exit mobile version