Site icon PowerTV

ಕಾರು ಟಿಟಿ ವಾಹನ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸಾವು

ತುಮಕೂರು: ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತಗೊಂಡು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬೇಗೂರು ಬ್ರಿಡ್ಜ್ ಬಳಿ‌ ನಡೆದಿದೆ.

ಟಿಟಿ ವಾಹನದಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಗೂ ಗಾಯಾಳುಗಳ ಮಾಹಿತಿ ಇನ್ನು ಲಭ್ಯವಾಗಿಲ್ಲ.

ಬೆಂಗಳೂರಿನಿಂದ ಹಾಸನಕಡೆಗೆ ತೆರಳುತ್ತಿದ್ದ ಇನೋವ ಕಾರು. ಹಾಸನದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟಿಟಿ ವಾಹನವಾಗಿದ್ದು, ಡಿವೈಡರ್ ದಾಟಿ ಟಿಟಿ ವಾಹನಕ್ಕೆ ಡಿಕ್ಕಿ ಇನೋವ ಕಾರು ಹೊಡೆದಿದೆ. ಅಲ್ಲದೇ ಸ್ಥಳದಲ್ಲಿ ಮತ್ತೊಂದು ಬುಲೆಟ್ ದ್ವಿಚಕ್ರ ಪತ್ತೆಯಾಗಿದ್ದು, ಬೈಕ್ ಸವಾರ ಯಾರೆಂದು ಮಾಹಿತಿ ತಿಳಿದಿಲ್ಲ.

ಸದ್ಯ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಪ್ರಕರಣವು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Exit mobile version