ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ : ಸಿದ್ದರಾಮಯ್ಯ

ಮೈಸೂರು : ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಬಿಎಸ್‍ವೈ ಸಿದ್ದು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದ್ದರು. ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ. ಅವನು ಜೆಡಿಎಸ್‍ನಲ್ಲಿ ಕ್ಯಾಪ್ಟೀವ್ ಪ್ರೆಸಿಡೆಂಟ್ ಇದ್ದಂತೆ. ಕುಳಿತುಕೋ ಎಂದರೆ ಕುಳಿತುಕೊಳ್ಳಬೇಕು. ನಿಂತುಕೋ ಅಂದರೆ ನಿಂತುಕೊಳ್ಳಬೇಕು ಎಂದು ವ್ಯಂಗ್ಯವಾಡಿದರು.

ಅಷ್ಟೆಅಲ್ಲದೇ ಎಂಎಲ್‍ಸಿ ಮಾಡುತ್ತೇವೆ ಅಂತ ಹೇಳಿ ಕರೆದುಕೊಂಡು ಹೋದರು. ಎಂಎಲ್‍ಸಿ ಮಾಡಿದ್ದಾರಾ? ಏನೋ ಒಂದು ಹುದ್ದೆ ಕೊಟ್ಟಿದ್ದಾರೆ ಅಂತ ಬಾಯಿಗೆ ಬಂದಂತೆ ಮಾತನಾಡುತ್ತಾನೆ ಎಂದು ಲೇವಡಿ ಮಾಡಿದರು.

RELATED ARTICLES

Related Articles

TRENDING ARTICLES