Site icon PowerTV

ಪ್ರತಾಪ್ ಸಿಂಹ ಅಯೋಗ್ಯ : ಹೆಚ್.ವಿಶ್ವನಾಥ್

ಮೈಸೂರು: ಕರ್ನಾಟಕದ ಶಾಂತಿಯನ್ನು ಮಸೀದಿಯಲ್ಲಿ ಶಿವಲಿಂಗ ಹುಡುಕುವ ಮೂಲಕ ಕದಡಲಾಗುತ್ತಿದೆ. ರಾಜ್ಯದ ಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿಸಿರುವ ನಿಮಗೆ ನಾಚಿಕೆ ಅಗೋದಿಲ್ವಾ ಎಂದು ಆರ್ ಎಸ್‌ಎಸ್ ಮುಖಂಡರ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಕ್ತಾರರು ಬಾಯಿಗೆ ಬಂದ ರೀತಿ ಮಾತನಾಡುತ್ತಿದ್ದಾರೆ. ನಾಯಕರು ಇದಕ್ಕೆ ಕಡಿವಾಣ ಹಾಕಬೇಕು. ಮಸೀದಿಗಳಿಗೆ ಸಂಬಂಧಿಸಿದಂತೆ ಇರುವ ವಿವಾದಗಳನ್ನು ನ್ಯಾಯಾಲಯದ ಮೂಲಕ ಬಗೆಹರಿಸಿಕೊಳ್ಳೋಣ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಇನ್ನು ಅವರ ಹೇಳಿಕೆಯ ಹಿಂದೆ ಒಳ್ಳೆಯ ಉದ್ದೇಶವಿದೆ. ಅವರ ಹೇಳಿಕೆಯನ್ನು ಏಕೆ ಸ್ವಾಗತಿಸುತ್ತಿಲ್ಲ. ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಯಾಕೆ ತುಟಿ ಬಿಚ್ಚುತ್ತಿಲ್ಲ. ಹಾಗಾದರೆ ನೀವು ಮೋಹನ್ ಭಾಗವತ್ ಹೇಳಿಕೆಯನ್ನು ವಿರೋಧಿಸುತ್ತೀರಾ? ಭಾಗವತ್ ಕುಣಿಯುವುದನ್ನು ನಿಲ್ಲಿಸಿ ಎಂದರೂ ನೀವು ಏಕೆ ಕುಣಿಯುತ್ತಿದೀರಾ? ಎಂದರು.

ಇನ್ನು ಪ್ರತಾಪ್ ಸಿಂಹ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು ? ಸಿದ್ದರಾಮಯ್ಯ ನಾವೆಲ್ಲರೂ ಒಟ್ಟಿಗೆ ಪ್ರಾಕ್ಟೀಸ್ ಮಾಡಿದ್ದೇವೆ. ಅವನಿಗೇನಾಗಿದೆ ಬಾಯಿಗೆ ಬಂದಂಗೆ ಮಾತನಾಡ್ತಾನೆ. ಅಲ್ಲದೇ ಮಹಾರಾಜರನ್ನು ಬಿಟ್ಟರೇ ನಾನೇ ಹೆಚ್ಚು ಕೆಲಸ ಮಾಡಿದ್ದೇನೆ ಅಂತಾನೆ. ಈ ಎಂಪಿ ಕಾಲದಲ್ಲಿ ಏನೂ ಕೆಲಸವಾಗಿಲ್ಲ. 2014 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ನಾನು ಸೋಲುತ್ತಿರಲಿಲ್ಲ ಎಂದು ಹೆಚ್ ವಿಶ್ವನಾಥ್ ಹೇಳಿದರು.

Exit mobile version