Site icon PowerTV

ಮೋದಿ ಮುಸ್ಲಿಂ ರಾಷ್ಟ್ರಗಳ ಮಾತು ಕೇಳುತ್ತಾರೆ : ಓವೈಸಿ

ಮಹಾರಾಷ್ಟ್ರ : ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತದಲ್ಲಿರುವ ಮುಸ್ಲಿಮರ ಮಾತು ಕೇಳುವುದಿಲ್ಲ. ಮುಸ್ಲಿಂ ರಾಷ್ಟ್ರಗಳ ಮಾತು ಕೇಳುತ್ತಾರೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇಂದು ಹೇಳಿದ್ದಾರೆ.

ಪ್ರವಾದಿ ವಿರುದ್ಧ ನೂಪುರ್ ಶರ್ಮಾ ನೀಡಿರುವ ನಿಂದನೆಯ ಹೇಳಿಕೆ ಕುರಿತು ಮಾತನಾಡಿದ ಅವರು, ಕತಾರ್, ಸೌದಿ ಅರೇಬಿಯಾ, ಬಹ್ರೇನ್‌ನಲ್ಲಿ ವಿರೋಧಗಳು ವ್ಯಕ್ತವಾದ ಬಳಿಕ ಬಿಜೆಪಿ ನೂಪುರ್ ಶರ್ಮಾ ವಿರುದ್ಧ ಕ್ರಮ ಕೈಗೊಂಡಿತು ಎಂದು ಹೇಳಿದ್ದಾರೆ.

ಪ್ರವಾದಿ ಮೊಹಮ್ಮದ್ ವಿರುದ್ಧ ನೂಪುರ್ ಮಾತನಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾವು ಆಗ್ರಹಿಸಿದ್ದೆವು. ಆದರೆ, ಈ ವೇಳೆ ಪ್ರಧಾನಿ ಮೋದಿ ಕಿವಿಕೊಟ್ಟಿರಲಿಲ್ಲ. ಇದೀಗ ಮುಸ್ಲಿಂ ರಾಷ್ಟ್ರಗಳಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಅವರ ವಿರುದ್ಧ ಕ್ರಮ ಕೈಗೊಂಡಿದ್ದಾರೆಂದು ಹೇಳಿದ್ದಾರೆ.

ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ನೂಪುರ್ ಶರ್ಮಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮತ್ತು ಬಿಜೆಪಿ ರಾಷ್ಟ್ರೀಯ ವಕ್ತಾರೆ ಹುದ್ದೆಯಿಂದ ಭಾನುವಾರ ಅಮಾನತುಗೊಳಿಸಲಾಗಿತ್ತು.

Exit mobile version