Site icon PowerTV

ಬಿಜೆಪಿ ಯಾರಿಗೂ ಆಫರ್ ಕೊಟ್ಟಿಲ್ಲ : ಸಿ ಎಂ ಬೊಮ್ಮಾಯಿ

ಮೈಸೂರು : ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ‌ನೀಡಿರುವ ಸೂಚನೆಯಂತೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ರಾಜ್ಯಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿ, ಬಿಜೆಪಿ ಯಾರಿಗೂ ಆಫರ್ ಕೊಟ್ಟಿಲ್ಲ. ಅಭ್ಯರ್ಥಿಗಳ ಗೆಲುವಿಗೆ ಬೇಕಾದಷ್ಟು ಮತಗಳು ನಮ್ಮ ಬಳಿ ಇವೆ. ಕಾಂಗ್ರೆಸ್ ಅಥವಾ ಜೆಡಿಎಸ್‌ ನಡುವೆ ಏನೂ ಆಫರ್ ಇದೆಯೋ ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ತಿಳಿಸಿದರು.

Exit mobile version