Site icon PowerTV

ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ಬೊಮ್ಮಾಯಿ ಖಂಡನೆ

ಮೈಸೂರು : ಮೇಕದಾಟು ಯೋಜನೆ ತಡೆ ಹಿಡಿಯುವ ಬಗ್ಗೆ ಸುಪ್ರೀಂಕೋರ್ಟ್‌ಗೆ ತಮಿಳುನಾಡು ಅರ್ಜಿ ಸಲ್ಲಿಸಿರುವುದಕ್ಕೆ  ಸಿಎಂ ಬೊಮ್ಮಾಯಿ ಕಿಡಿ ಕಾರಿದ್ದಾರೆ.

ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ನ್ಯಾಯ ಸಮ್ಮತವಲ್ಲ.ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದು ಸರಿಯಾದ ಕ್ರಮ ಅಲ್ಲ. ಸುಪ್ರೀಂಕೋರ್ಟ್ ನಮಗೆ ನೋಟಿಸ್ ಕೊಟ್ಟಿದ್ದರು. ಅದಕ್ಕೆ ನಾವು ಸಮರ್ಥವಾದ ಉತ್ತರ ಕೊಟ್ಟಿದ್ದೇವೆ ಎಂದರು.

ಅಷ್ಟೆಅಲ್ಲದೇ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಸುಪ್ರೀಂಕೋರ್ಟ್ ಆದೇಶದ ಅನ್ವಯ ರಚನೆಯಾಗಿದೆ. ಕಾವೇರಿ ನದಿಗೆ ಸಂಬಂಧಪಟ್ಟಂತೆ ಯಾವ ಯೋಜನೆ ಜಾರಿಗೊಳಿಸಬೇಕು, ಜಾರಿಗೊಳಿಸಬಾರದು ಎಂದು ತೀರ್ಮಾನ ಮಾಡುವ ಅಧಿಕಾರ ಪ್ರಾಧಿಕಾರಕ್ಕೆ ಮಾತ್ರ ಇದೆ.ಮೇಕೆದಾಟು ಯೋಜನೆ ಸಂಬಂಧ ಈಗಾಗಲೇ 16-17 ಸಭೆಗಳು ಆಗಿವೆ ಎಂದು ತಿಳಿಸಿದರು.

Exit mobile version