Site icon PowerTV

200ಮಿಲಿಯನ್​ ಫಾಲೋವರ್ಸ್‌ ಹೊಂದಿದ ಭಾರತದ ಮೊದಲ ಕ್ರಿಕೆಟಿಗ ಕೊಹ್ಲಿ

ಬೆಂಗಳೂರು : ಟೀಂ ಇಂಡಿಯಾ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದ್ದು, ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ 200 ಮಿಲಿಯನ್ ಫಾಲೋವರ್ಸ್ ಹೊಂದಿದ ಭಾರತದ ಮೊದಲ ಹಾಗೂ ಜಗತ್ತಿನ ಒಟ್ಟಾರೆ 3ನೇ ಅಥ್ಲೀಟ್ ಎನ್ನುವ ಕೀರ್ತಿಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

ಆಧುನಿಕ ಕ್ರಿಕೆಟ್‌ನ ಸೂಪರ್‌ ಸ್ಟಾರ್ ಬ್ಯಾಟರ್ ಎನಿಸಿಕೊಂಡಿರುವ ಕಿಂಗ್ ಕೊಹ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು, ತಮ್ಮ ದಿನನಿತ್ಯದ ಚಟುವಟಿಕೆಗಳ ಬಗ್ಗೆ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.

ಇದೀಗ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ 200 ಮಿಲಿಯನ್ ಫಾಲೋವರ್ಸ್‌ ಹೊಂದಿದ ಭಾರತದ ಮೊದಲ ಕ್ರಿಕೆಟಿಗ ಎನ್ನುವ ಹಿರಿಮೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಇದರ ಬೆನ್ನಲ್ಲೇ ಮಾಜಿ ನಾಯಕ ವಿರಾಟ್ ಕೊಹ್ಲಿ, ಬಲಿಷ್ಠ 200 ಮಿಲಿಯನ್‌. ಇನ್‌ಸ್ಟಾಗ್ರಾಂ ಕುಟುಂಬಕ್ಕೆ ಅನಂತ ಧನ್ಯವಾದಗಳು ಎಂದು ತಮ್ಮ ಜೀವನದ ಅಮೂಲ್ಯ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು ಪೋಸ್ಟ್‌ ಮಾಡಿದ್ದಾರೆ.

Exit mobile version