Site icon PowerTV

ಕೋವಿಡ್ ಕಂಟ್ರೋಲ್ ಗೆ ಟಫ್ ರೂಲ್ಸ್ ಜಾರಿ ಮಾಡಿದ ಬಿಬಿಎಂಪಿ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಬಿಬಿಎಂಪಿ ಟಫ್ ರೂಲ್ಸ್ ಜಾರಿ ಮಾಡಿದೆ.

ಮಾಲ್ ಥಿಯೇಟರ್ ಹಾಗೂ ರೈಲ್ವೆ ನಿಲ್ದಾಣ ಮಾರ್ಕೆಟ್, ಬಸ್ ನಿಲ್ದಾಣ ಸೇರಿದಂತೆ ಜನ ನಿಬೀಡ ಕಡೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಕಡ್ಡಾಯ ಜೊತೆಗೆ ಕೋವಿಡ್ ವ್ಯಾಕ್ಸಿನೇಷನ್‌ ಸರ್ಟಿಫಿಕೇಟ್ ಚೆಕ್ ಮಾಡಲು ಮಾರ್ಷಲ್​ಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಅದಲ್ಲದೇ, ಪ್ರತಿ ಮಾಲ್ ಹಾಗೂ ಥಿಯೇಟರ್​ಗಳಿಗೆ ಎಂಟ್ರಿ ಕೊಡಬೇಕಾದ್ರೆ ಕೋವಿಡ್ ವ್ಯಾಕ್ಸಿನೇಷನ್‌ ಸರ್ಟಿಫಿಕೇಟ್ ಕಡ್ಡಾಯ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಸ್ಪಷ್ಟನೆ ನೀಡಿದ್ದಾರೆ.

Exit mobile version