Site icon PowerTV

ನಯನತಾರಾ – ವಿಘ್ನೇಶ್ ಅದ್ಧೂರಿ​ ಮದುವೆ

ನಿರ್ದೇಶಕ ವಿಘ್ನೇಶ್​​ ಶಿವನ್ ಹಾಗೂ ನಯನತಾರಾ ಇಂದು ವಿವಾಹ ಬಂಧನಕ್ಕೆ ಕಾಲಿಡುತ್ತಿದ್ದಾರೆ. ತಮಿಳುನಾಡಿನ ಮಹಾಬಲಿಪುರಂನಲ್ಲಿರುವ ಐಷಾರಾಮಿ ರೆಸಾರ್ಟ್‌ನಲ್ಲಿ ಈ ಜೋಡಿಯ ಮದುವೆ ಕಾರ್ಯಕ್ರಮ ನಡೆಯಲಿದೆ.

ನಯನತಾರಾ ತಮಿಳು, ತೆಲುಗು, ಕನ್ನಡ ಸೇರಿದಂತೆ ಬಹುಭಾಷೆಯ ಚಿತ್ರಗಳಲ್ಲಿ ಮಿಂಚು ಹರಿಸಿದ್ದಾರೆ. ತಮಿಳು ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಇಂದು ಇಬ್ಬರ ಪ್ರೀತಿಗೆ ಅಧಿಕೃತ ಮುದ್ರೆ ಬಿದ್ದಿದೆ.ಅದಕ್ಕೂ ಮುಂಚಿತವಾಗಿ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದ್ದ ವಿಘ್ನೇಶ್ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಲಭ್ಯವಾಗಿರುವ ಮಾಹಿತಿ ಪ್ರಕಾರ ಇಂದಿನ ಮದುವೆ ಕಾರ್ಯಕ್ರಮ ಹಾಗೂ ಜೂನ್​ 11ರಂದು ನಡೆಯಲಿರುವ ಆರಕ್ಷತೆಯಲ್ಲಿ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಪ್ರಮುಖವಾಗಿ ಕಮಲ್ ಹಾಸನ್​, ರಜನಿಕಾಂತ್​, ಸಮಂತಾ ಸೇರಿದಂತೆ ಅನೇಕರು ಆಗಮಿಸಿ, ನವ ಜೋಡಿಗೆ ಶುಭ ಕೋರಲಿದ್ದಾರೆ. ಈ ಜೋಡಿಯ ಮದುವೆ ಕಾರ್ಯಕ್ರಮ ಒಟಿಟಿಯಲ್ಲಿ ಪ್ರಸಾರವಾಗಲಿದೆ.

Exit mobile version