Site icon PowerTV

ಜುಲೈ 18ಕ್ಕೆ ಭಾರತದ 15ನೇ ʼರಾಷ್ಟ್ರಪತಿ ಚುನಾವಣೆ’

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದ್ದು, ರಾಷ್ಟ್ರಪತಿ ಚುನಾವಣೆಯ ದಿನಾಂಕವನ್ನ ಚುನಾವಣಾ ಆಯೋಗ ಪ್ರಕಟಿಸಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇದೇ ಜುಲೈ 18ರಂದು ರಾಷ್ಟ್ರಪತಿ ಚುನಾವಣೆಯ ಮತದಾನ ನಡೆಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಜೂನ್ 15ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮನಿರ್ದೇಶನಕ್ಕೆ ಕೊನೆಯ ದಿನಾಂಕ ಜೂನ್ 29 ಆಗಿದೆ. ಜುಲೈ 18 ರಂದು ಮತದಾನ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ.

ದೇಶದ ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಮುಕ್ತಾಯವಾಗಲಿದೆ. ಕೊನೆಯ ಅಧ್ಯಕ್ಷೀಯ ಚುನಾವಣೆಯು 17 ಜುಲೈ 2017 ರಂದು ನಡೆದಿತ್ತು. 2017 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸುಮಾರು ಶೇ.50 ರಷ್ಟು ಮತಗಳು ಎನ್‌ಡಿಎ ಪರವಾಗಿ ಇದ್ದವು. ಒಟ್ಟು 4,880 ಮತದಾರರಲ್ಲಿ 4,109 ಶಾಸಕರು ಮತ್ತು 771 ಸಂಸದರು ಮತ ಚಲಾಯಿಸಿದ್ದರು.

Exit mobile version