Sunday, September 7, 2025
HomeUncategorizedರಾಜ್ಯದಲ್ಲಿಂದು 471 ಹೊಸ ಕೋವಿಡ್-19 ಪ್ರಕರಣ ದಾಖಲು

ರಾಜ್ಯದಲ್ಲಿಂದು 471 ಹೊಸ ಕೋವಿಡ್-19 ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 471 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39, 54,784ಕ್ಕೆ ಏರಿಕೆಯಾಗಿದೆ.

ಇಂದು 214 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 2,880 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 458 ಹೊಸ ಪ್ರಕರಣ ಪತ್ತೆಯಾಗಿದ್ದು, 208 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೇ 2,776 ಸಕ್ರಿಯ ಪ್ರಕರಣ ದಾಖಲಾಗಿದೆ. ಉಡುಪಿ, ಕಲಬುರಗಿಗಳಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ಕಡೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular

Recent Comments