Site icon PowerTV

ಪಠ್ಯಪುಸ್ತಕ ಪರಿಷ್ಕರಣೆ ಹೇಳಿಕೆ ಹಿಂಪಡೆದ ಸಚಿವ ಸುನೀಲ್ ಕುಮಾರ್

ಬೆಂಗಳೂರು: ಪಠ್ಯಪುಸ್ತಕ ಬದಲಾವಣೆ ಸಣ್ಣ ವಿಚಾರ ಎಂಬ ಹೇಳಿಕೆಗೆ ಸಾಹಿತಿಗಳು ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸುನೀಲ್ ಕುಮಾರ್ ಅವರು ಗುರುವಾರ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧ್ವಜ ವಿಚಾರ ಸಣ್ಣ ವಿಚಾರವಲ್ಲ. ಈ ವಿಚಾರದ ಕುರಿತು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಲಾಗಿದೆ. ಕೆಲವು ಸಾಹಿತಿಗಳು ತಮ್ಮ ಬರವಣಿಗೆಗಳನ್ನು ಪಠ್ಯಪುಸ್ತಕದಿಂದ ತೆಗೆಯುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಸಾಹಿತಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆಂದು ಹೇಳಿದ್ದಾರೆ.

ಬಳಿಕ ಚಡ್ಡಿ ವಿವಾದ ಕುರಿತು ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಬುದ್ಧಿ ಹೇಳುವಷ್ಟು ನಾನು ದೊಡ್ಡವನಲ್ಲ. ಆದರೆ, ವಿವಾದವನ್ನು ಹುಟ್ಟು ಹಾಕುತ್ತಿರುವ ಅವರ ವಿಕೃತ ಮನಸ್ಸನ್ನು ಸುಟ್ಟು ಹಾಕಬೇಕು. ಜಾತಿ – ಜಾತಿಗಳ ನಡುವೆ ವಿಷ ಬೀಜವನ್ನು ಬಿತ್ತುವ ಸಿದ್ದರಾಮಯ್ಯನವರ ಮನಸ್ಥಿತಿ ಸುಟ್ಟುಹಾಕಬೇಕಾಗಿದೆ ಎಂದು ತಿಳಿಸಿದರು.

Exit mobile version