Wednesday, September 17, 2025
HomeUncategorizedಇಂದಿನಿಂದ ಮೂರು ದಿನ ವರುಣಾರ್ಭಟ

ಇಂದಿನಿಂದ ಮೂರು ದಿನ ವರುಣಾರ್ಭಟ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಹತ್ತು ದಿನಳಿಂದ ಮುಂಗಾರು ದುರ್ಬಲವಾಗಿತ್ತು, ಇದೀಗ ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಕೃಷಿ ಚಟುವಟಿಕೆಯೂ ಚುರುಕುಗೊಂಡಿದೆ.

ನಗರದಲ್ಲಿ ಮಳೆ ಕಡಿಮೆಯಾಗಿ, ಮೋಡ ಮುಸುಕಿದ ವಾತಾವರಣವಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್​​ 14ರವರೆಗೆ ಮಳೆ ಹೆಚ್ಚಾಗಲಿದೆ. ಇಂದು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ , ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು , ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಇಂದು ದಕ್ಷಿಣ ಮಹರಾಷ್ಟ್ರ, ಕರ್ನಾಟಕದ ಉತ್ತರ ಒಳನಾಡು, ಆಂದ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.

RELATED ARTICLES
- Advertisment -
Google search engine

Most Popular

Recent Comments