Site icon PowerTV

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರ : ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನ ಕಾಂಜಿಯುಲಾರ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಎನ್​​ಕೌಂಟರ್​​ನಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಜೊತೆ ನಂಟು ಹೊಂದಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಎನ್​​ಕೌಂಟರ್ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ ಇಬ್ಬರು ಉಗ್ರರಲ್ಲಿ ಒಬ್ಬ ಈ ಹಿಂದೆ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ, ಇಬ್ಬರು ಉಗ್ರರ ಪೈಕಿ ಒಬ್ಬನನ್ನು ಜಾನ್ ಮೊಹಮ್ಮದ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು, ಶೋಪಿಯಾನ್ನ ನಿವಾಸಿಯಾಗಿರುವ ಜಾನ್ ಮೊಹಮ್ಮದ್, ಕುಲ್ಗಾಮ್ ಜಿಲ್ಲೆಯಲ್ಲಿ ಜೂನ್ 2ರಂದು ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಈತ ಭಾಗಿಯಾಗಿದ್ದ ಎಂದು ಕಾಶ್ಮೀರ ವಲಯ ಪೊಲೀಸ್ ಐಜಿಪಿ ಕಾಶ್ಮೀರ ವಿಜಯ್ ಕುಮಾರ್ ತಳಿಸಿದ್ದಾರೆ.

Exit mobile version