Site icon PowerTV

ರಾಜಭವನಕ್ಕೆ ಮುತ್ತಿಗೆ ಹಾಕಲು ‘ಕೈ’ ಪಾಳೆಯ ಪಾದಯಾತ್ರೆ

ಬೆಂಗಳೂರು: ರಾಗಾ ED ವಿಚಾರಣೆಗೆ ಮುಂದುವರಿದ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕೈ ನಾಯಕರು ಪಾದಯಾತ್ರೆ ಮಾಡಲಿದ್ದಾರೆ.

ನಗರದಲ್ಲಿ ಇಂದು, ಕೆಲಹೊತ್ತಿನಲ್ಲೇ ಕೈ ಪಡೆಯಿಂದ ರಾಜಭವನಕ್ಕೆ ಮುತ್ತಿಗೆ ಹಾಕಲು ‘ಕೈ’ ಪಾಳೆಯ ಪಾದಯಾತ್ರೆ ಮಾಡಲಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ದಬ್ಬಾಳಿಕೆ ಆರೋಪದ ಹಿನ್ನಲೆಯಲ್ಲಿ ಬೆಳಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿಯಿಂದ ಕಾಲ್ನಡಿಗೆ ಜಾಥಾ ನಡೆಯಲಿದೆ.

ಅದಲ್ಲದೇ ಈ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ಸೇರಿ ಕೆಪಿಸಿಸಿ ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು, ಹಾಲಿ, ಮಾಜಿ ಶಾಸಕರು, MLCಗಳು ಭಾಗಿಯಾಗಲಿದ್ದಾರೆ. ಪಾದಯಾತ್ರೆ ಮೂಲಕ ತೆರಳಿ ರಾಜಭವನಕ್ಕೆ ಮುತ್ತಿಗೆಗೆ ನಿರ್ಧಾರ ಮಾಡಿದ್ದು, ನಾಳೆ ರಾಜ್ಯದ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ‌ ಪ್ರತಿಭಟನೆಗೆ ಕರೆ ನೀಡಿದ್ದಾರೆ.

Exit mobile version