Site icon PowerTV

ಬಿಜೆಪಿ ಬೆದರಿಕೆಗೆ ಬಗ್ಗುವ ಪ್ರಶ್ನೆಯೇ ಇಲ್ಲ : ಡಿ.ಕೆ ಸುರೇಶ್

ದೆಹಲಿ : ಬಿಜೆಪಿ ಬೆದರಿಕೆಗೆ ಬಗ್ಗುವ ಪ್ರಶ್ನೆಯೇ ಇಲ್ಲ, ನಮಗೆ ಎಲ್ಲವನ್ನು ಎದುರಿಸುವ ಶಕ್ತಿ ಇದೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿ ದೆಹಲಿಯಲ್ಲಿ ಮಾತನಾಡಿದ ಅವರು, ರಾಹುಲ್ ಇಡಿಗೆ ನೀಡಿರುವ ಉತ್ತರ ಹೊರ ಬಂದಿರುವುದು ಊಹಾಪೋಹವಾಗಿದೆ. ಎಲ್ಲಾ ಸುಳ್ಳು ಮಾಹಿತಿಗಳನ್ನು ಹಬ್ಬಿಸಲಾಗುತ್ತಿದೆ. ಅಲ್ಲದೇ ಅವರ ಮೇಲೆ ಗೂಬೆ ಕೂರಿಸುವ ಪ್ರಯತ್ನವಾಗುತ್ತಿದೆ ಎಂದು ಕಿಡಿಕಾಡಿದರು.

ಅಷ್ಟೇಅಲ್ಲದೇ ಅಧಿಕಾರಿಗಳು ಇಲ್ಲ ಸಲ್ಲದ ಮಾಹಿತಿಗಳನ್ನು ನೀಡುತ್ತಿದ್ದಾರೆ. ತಪ್ಪು ಮಾಹಿತಿ ನೀಡಿ ರಾಹುಲ್​​ಗೆ ಮಸಿ ಬಳಿಯುವ ಕೆಲಸವಾಗುತ್ತಿದೆ. ಅವರು ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತಿದ್ದಾರೆ. ಆಡಳಿತ ಪಕ್ಷದ ಕುತಂತ್ರವನ್ನು ಎದುರಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇದೆ ಎಂದು ತಿಳಿಸಿದರು.

ಇಡಿ, ಸಿಬಿಐ ಬಳಸಿ ನಮ್ಮ ಹಣೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ತನಿಖೆಗೆ ಹೆದರುವ ಪ್ರಶ್ನೆ ಇಲ್ಲ. ಹೋರಾಟ ನಿರಂತರವಾಗಿ ನಡೆಯುತ್ತದೆ. ಬಿಜೆಪಿ ಕುತಂತ್ರ ನಿಲ್ಲುವವರೆಗೂ ಹೋರಾಟ ಮಾಡಿತ್ತೇವೆ ಎಂದು ದೆಹಲಿಯಲ್ಲಿ ಸಂಸದ‌ ಡಿ.ಕೆ‌ ಸುರೇಶ್‌ ಹೇಳಿಕೆ ನೀಡಿದರು.

Exit mobile version