Site icon PowerTV

ಕಾಂಗ್ರೆಸ್‌ ಮುಳುಗುತ್ತಿರುವ ಹಡಗು : ಶಾಸಕ ಎಂ.ಪಿ.ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್‌ ಮುಳುಗುತ್ತಿರುವ ಹಡಗು. ಆ ಪಕ್ಷವನ್ನು ನಾನ್ಯಾಕೆ ಸೇರಲಿ? ಮೋಟಮ್ಮ ಮತ್ತು ನನಗಾಗದವರು ಹೀಗೆ ಸುಳ್ಳು ಸುದ್ದಿಗಳನ್ನು ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಮೂಡಿಗೆರೆಯ ಶಾಸಕ ಎಂ.ಪಿ.ಕುಮಾರಸ್ವಾಮಿ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೋಟಮ್ಮ ಹಿರಿಯ ನಾಯಕಿ, ಅವರು ಬೇಕಾಬಿಟ್ಟಿ ಮಾತನಾಡಬಾರದು. ವೃಥಾ ನನ್ನ ವಿಚಾರಕ್ಕೆ ಬಂದರೆ ಸುಮ್ಮನಿರುವುದಿಲ್ಲ’ ಎಂದು ಕಿಡಿಕಾಡಿದರು.

ಇನ್ನು ಬಿಜೆಪಿ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದೆ. ಮೂರು ಬಾರಿ ಶಾಸಕನಾಗಲು ಅವಕಾಶ ನೀಡಿ, ಗೌರವ ನೀಡಿದೆ. ಇವೆಲ್ಲ ಮೋಟಮ್ಮ ಅವರಿಗೆ ಹೇಗೆ ಅರ್ಥ ಆಗಬೇಕು? ಅರಳು ಮರಳು ಹಿಡಿದವರಂತೆ ಅರ್ಥಹೀನ ಹೇಳಿಕೆಗಳನ್ನು ನೀಡುವುದು ಅವರ ಹಿರಿತನಕ್ಕೆ ಶೋಭೆ ತರುವುದಿಲ್ಲ ಎಂದರು.

ಶೀಘ್ರವೇ ಮಂತ್ರಿ ಮಂಡಲ ವಿಸ್ತರಣೆ ಆಗಲಿದೆ. ನನಗೆ ಸಚಿವ ಸ್ಥಾನ ಸಿಗುವುದನ್ನು ತಪ್ಪಿಸಲು ಕಾಣದ ಕೈಗಳು ನಿಮ್ಮ ಮೂಲಕ ಹೇಳಿಕೆ ಕೊಡಿಸುತ್ತಿದ್ದಾರೆ. ಯಾರದ್ದೋ ಮಾತು ಕೇಳಿ ನನ್ನ ವಿರುದ್ಧ ಹೇಳಿಕೆಗಳನ್ನು ಕೊಡುವುದು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ನಿಜವಾದ ನಾಯಕಿಯಾಗಿದ್ದರೆ, ನನ್ನ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಪ್ರಯತ್ನ ಮಾಡಿ, ಆಗ ನಿಮಗೆ ತಕ್ಕ ಉತ್ತರ ನೀಡುತ್ತೇನೆ’ ಎಂದು ಹೇಳಿದರು.

Exit mobile version