Site icon PowerTV

ಸಾಯಿ ಪಲ್ಲವಿಗೆ ಟ್ರೋಲ್‌ ಮಾಡೋದು ಬೆದರಿಕೆಯೊಡ್ಡುವುದು ನಿಲ್ಬೇಕು : ನಟಿ ರಮ್ಯಾ

ಬೆಂಗಳೂರು : ಸಾಯಿ ಪಲ್ಲವಿ ಹೇಳಿಕೆಯನ್ನು ರಮ್ಯಾ ಟ್ವೀಟ್‌ ಮಾಡುವುದರ ಮೂಲಕ ಬೆಂಬಲಿಸಿದ್ದರು. ಇದೀಗ ಸರಣಿ ಟ್ವೀಟ್‌ ಮೂಲಕ ತಮ್ಮ ಅಭಿಪ್ರಾಯವನ್ನು ತಿಳಿಸಿರುವ ಅವರು, ಸಾಯಿ ಪಲ್ಲವಿ ಅವರನ್ನು ಟ್ರೋಲ್‌ ಮಾಡುವುದು ಹಾಗೂ ಅವರಿಗೆ ಬೆದರಿಕೆಯೊಡ್ಡುವುದು ನಿಲ್ಲಬೇಕು ಎಂದು ಕಿಡಿಕಾರಿದರು.

ಎಲ್ಲರೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯ ಹೊಂದಿದ್ದಾರೆ. ಅಥವಾ ಮಹಿಳೆಯರಿಗೆ ಈ ಅಧಿಕಾರ ಇಲ್ಲ ಎಂಬುವುದು ಈ ವಿರೋಧದ ಅರ್ಥವೇ? ನಿಂದನೆ ಮಾಡದೇ ವಿಷಯವೊಂದರ ಕುರಿತು ವಿರೋಧ ವ್ಯಕ್ತಪಡಿಸಬಹುದು ಎಂದಿದ್ದಾರೆ.

ಅಲ್ಲದೇ ಪ್ರಸ್ತುತ ಯಾರಾದರೂ ನೀವು ಒಳ್ಳೆಯ ಮನುಷ್ಯರಾಗಿ ಅಥವಾ ‘ದಯಾಳುವಾಗಿ’ ಎಂದರೆ ಅವರಿಗೆ ರಾಷ್ಟ್ರ ವಿರೋಧಿ ಹಣೆಪಟ್ಟಿ ಕಟ್ಟಲಾಗುತ್ತದೆ. ಅದೇ ‘ಗೋಲಿ ಮಾರೊ’ ಎಂಬುವವರು ನಿಜವಾದ ನಾಯಕರಾಗುತ್ತಾರೆ. ನಾವೆಂಥ ಲೋಕದಲ್ಲಿ ಬದುಕುತ್ತಿದ್ದೇವೆ’ ಎಂದು ರಮ್ಯಾ ಟ್ವೀಟ್‌ ಮೂಲಕ ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version