Tuesday, September 2, 2025
HomeUncategorizedಮದುವೆಗೆ ಅಡ್ಡಿಯಾದ ಕುಜ ದೋಷ: ವಿಷ ಸೇವಿಸಿ ಮಹಿಳಾ ಪೊಲೀಸ್ ಮೃತ

ಮದುವೆಗೆ ಅಡ್ಡಿಯಾದ ಕುಜ ದೋಷ: ವಿಷ ಸೇವಿಸಿ ಮಹಿಳಾ ಪೊಲೀಸ್ ಮೃತ

ಶಿವಮೊಗ್ಗ: ಮದುವೆಗೆ ಅಡ್ಡಿಯಾಗಿದ್ದ ಕುಜ ದೋಷಕ್ಕೆ ಮಹಿಳಾ ಪೊಲೀಸ್ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಾಪುರದಲ್ಲಿ ನಡೆದಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಪ್ರವೀಣ್ ಮತ್ತು ತೀರ್ಥಹಳ್ಳಿ ಪೊಲೀಸ್​​​ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಸುಧಾ 6 ವರ್ಷದಿಂದ ಪ್ರೀತಿಸುತ್ತಿದ್ದರು. ಆರಂಭದಲ್ಲಿ‌ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ ಸಿದ್ದರಾಗಿದ್ದರು. ಆದರೆ ಪ್ರವೀಣ್ ತಾಯಿ ಯುವತಿಯ ಜಾತಕವನ್ನು ಜ್ಯೋತಿಷಿಯೊಬ್ಬರಿಗೆ ತೋರಿಸಿದ್ದರು. ಜ್ಯೋತಿಷಿ ಈ ಯುವತಿಗೆ ಕುಜ ದೋಷ ಇದೆ. ಇವಳೊಂದಿಗೆ ವಿವಾಹವಾದರೆ ನಿಮ್ಮ ಮಗನ ಆಯಸ್ಸು ಕಡಿಮೆ ಎಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಕುಜ ದೋಷ ಇರುವ ಹುಡುಗಿ ಜೊತೆ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಪ್ರವೀಣ್ ತಾಯಿ ತಿಳಿಸಿದ್ದರು.

ಇದರಿಂದ ಮನನೊಂದ ಪ್ರೇಮಿಗಳು ಮೇ.31ರಂದು ಭದ್ರಾವತಿಯ APMC ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಆದರೆ ಯುವತಿ ಸುಧಾಳನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್‍ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯ ರಾತ್ರಿ ಆಸ್ಪತ್ರೆಯಲ್ಲಿ ಯುವತಿ ಮೃತಪಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments