Site icon PowerTV

ಮೈಸೂರಿನಲ್ಲಿ ಮೋದಿ ಯೋಗ ಮಾಡುತ್ತಿರುವುದು ನಮ್ಮ ಹೆಮ್ಮೆ : ಅರಗ ಜ್ಞಾನೇಂದ್ರ

ಮೈಸೂರು: ಮೈಸೂರನಲ್ಲಿ ಮೋದಿ ಯೋಗ ಮಾಡುತ್ತಿರುವುದು ನಮ್ಮ ಹೆಮ್ಮೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗ ದಿನಾಚರಣೆ ಹಿನ್ನಲೆಯಲ್ಲಿ ಭದ್ರತೆ ವ್ಯವಸ್ಥೆಯನ್ನ ವೀಕ್ಷಣೆ ಮಾಡಿದ್ದೇನೆ. ಮೈಸೂರನಲ್ಲಿ ಮೋದಿ ಯೋಗ ಮಾಡುತ್ತಿರುವುದು ನಮ್ಮ ಹೆಮ್ಮೆ. ಗೃಹ ಇಲಾಖೆ ಎಲ್ಲಾ ಏರ್ಪಾಡುಗಳನ್ನ ಮಾಡಿದ್ದಾರೆ. ಪ್ರಧಾನ ಮಂತ್ರಿಗೆ ಸಾಕಷ್ಟು ಭದ್ರತೆಯ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಎಲ್ಲಾ ಸಿದ್ಧತೆ ಮಾಡಲಾಗಿದೆ ಎಂದರು.

ಇನ್ನು, ಅಗ್ನಿ ಪಥ್ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ಅಗ್ನಿ ಪಥ ಒಂದು ಒಳ್ಳೆಯ ಯೋಜನೆ. ಯುವ ಜನಾಂಗ ಮೋದಿಗೆ ಅಭಿನಂದನೆ ಸಲ್ಲಿಸಬೇಕು. ಕರ್ನಾಟಕ ರಾಜ್ಯದ ಗೃಹ ರಕ್ಷಕ ದಳ, ಅಗ್ನಿ ಶಾಮಕ ದಳ ಬೇರೆ ಬೇರೆ ಸೆಕ್ಯೂರಿಟಿ ಎಜೆನ್ಸಿಗಳಲ್ಲಿ ಅವರಿಗೆ ಉದ್ಯೋಗ ಕೊಡಲು ವ್ಯವಸ್ಥೆ ಮಾಡಲಾಗಿದೆ. ದೇಶ ಭಕ್ತರು ದೇಶ ಕಾಯೊದಕ್ಕೆ ಹೋಗುತ್ತಾರೆ. ಬೆಂಕಿ‌ ಹಚ್ಚುವ ಕೆಲಸ ಮಾಡಬಾರದು. ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಗ್ನಿಪಥ ಗಲಾಟೆ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಇದನ್ನ ನೇರವಾಗಿ ಹೇಳುತ್ತೇನೆ ಎಂದು ಹೇಳಿದರು.

Exit mobile version