Site icon PowerTV

2 ವರ್ಷಗಳ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ

ಬೆಂಗಳೂರು : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ-20 ಪಂದ್ಯವು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈಗಾಗಲೇ ಟೂರ್ನಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಈಗಾಗಲೇ 5 ಪಂದ್ಯಗಳ ಟೂರ್ನಿಯಲ್ಲಿ 2-2 ರ ಸಮಬಲ ಸಾಧಿಸಿದೆ. ಹೀಗಾಗಿ ಇಂದು ಬೆಂಗಳೂರಿನಲ್ಲಿ ನಡೆಯುವ ಪಂದ್ಯ ನಿರ್ಣಾಯಕವಾಗಿದ್ದು, ಕೊನೆಯ ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿಯನ್ನು ಗೆಲ್ಲಲಿದೆ. ಹೀಗಾಗಿ ನಾಳಿನ ಪಂದ್ಯದ ಮೇಲೆ ಹೆಚ್ಚಿನ ನಿರೀಕ್ಷೆಗಳಿವೆ.

ಇನ್ನು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬರೋಬ್ಬರಿ ಎರಡು ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯ ನಡೆಯುವ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಎಂ ಸುತ್ತ ಮುತ್ತ ಸಂಚಾರ ನಿರ್ಬಂಧಿಸಲಾಗಿದೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆವರೆಗೂ ಸ್ಟೇಡಿಯಂ ಸುತ್ತ-ಮುತ್ತ ವಾಹನ ನಿಲುಗಡೆಗೆ ನಿಷೇಧಿಸಲಾಗುವುದೆಂದು ಪೊಲೀಸ್ ಆಯಕ್ತರಿಂದ ಆದೇಶ ಹೊರಡಿಸಲಾಗಿದೆ.

Exit mobile version