Site icon PowerTV

ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ಸಿಗರ ಬಂಧನ

ಶಿವಮೊಗ್ಗ : ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟಿಸಲು ಮುಂದಾಗಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ರೈಲು ನಿಲ್ದಾಣದ ಮುಂಭಾಗದಲ್ಲಿ ಘಟನೆ ಮಾಡಿದ್ದು, ಯುವಕರನ್ನು ಸೈನ್ಯಕ್ಕೆ ಸೇರಿಸುವ ಅಗ್ನಿಪಥ್ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ಸಿಗರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನು, ಬಂಧನ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು. ಡೌನ್ ಡೌನ್ ಮೋದಿ, ಗೋ ಬ್ಯಾಕ್ ಮೋದಿ 420, ಗೂಂಡಾ ಸರ್ಕಾರ ಮೋದಿ ಎಂದು ಕೂಡ ಘೋಷಣೆ ಕೋಗಿದ್ದಾರೆ. ಮಾಜಿ ಶಾಸಕರಾದ ಆರ್. ಪ್ರಸನ್ನ ಕುಮಾರ್ ಮತ್ತು ಕೆ.ಬಿ. ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ರೈಲು ಮುತ್ತಿಗೆಗೆ ಆಗಮಿಸಿದ್ದ ಯುವ ಕಾಂಗ್ರೆಸ್ಸಿಗರನ್ನು, ರೈಲು ನಿಲ್ದಾಣದೊಳಗೆ ಪೊಲೀಸರು ಬಿಡಲಿಲ್ಲ. ಹೀಗಾಗಿ ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು.

Exit mobile version