Site icon PowerTV

ಕಾರ್ಯಕ್ರಮಕ್ಕೆ ಶುಭ ಹಾರೈಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಸಂದರ್ಭದಲ್ಲೇ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ರಾಜ್ಯ ಭೇಟಿಯ ಆ ದಿನವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿಕೊಂಡಿದ್ದಾರೆ.

ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಐದು ವರ್ಷಗಳ ಹಿಂದೆ 4-10-2017ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬೆಂಗಳೂರಿಗೆ ಬಂದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆಯಾದ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು,” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ನ ನೂತನ ಆವರಣವನ್ನು ಉದ್ಘಾಟಿಸುತ್ತಿದ್ದಾರೆ. ಈ ಸಮಾರಂಭಕ್ಕೆ ಶುಭ ಹಾರೈಸುವೆ,” ಎಂದು ಟ್ವೀಟ್ ಮಾಡಿದ್ದಾರೆ.

Exit mobile version