Site icon PowerTV

ಬೋನಿಗೆ ಚೀತಾ ಕೆಡವಿದ ಅರಣ್ಯ ಇಲಾಖೆ ಸಿಬ್ಬಂದಿಗಳು

ಶಿವಮೊಗ್ಗ: ಆಹಾರ ಹುಡುಕಿಕೊಂಡು ಭದ್ರಾವತಿ ವಿಐಎಸ್ಎಲ್ ಕ್ವಾಟ್ರಸ್​ನ ಮನೆಯ ಹಿತ್ತಲಿನಲ್ಲಿ ಪತ್ತೆಯಾಗಿದ್ದ ಮತ್ತು ಮಹಿಳೆಯಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನ ಸೆರೆ ಹಿಡಿಯಲಾಗಿದೆ. ಭದ್ರಾವತಿ ಪಟ್ಟಣದಲ್ಲಿ ಕಾಣಿಸಿಕೊಂಡು, ಭದ್ರಾವತಿ ಜನರನ್ನು ಆತಂಕಕ್ಕೀಡು ಮಾಡಿದ್ದ ಚಿರತೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು, ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ ಹಿಡಿದಿದ್ದಾರೆ.

ಅಂದಹಾಗೆ, ಇಂದು ಬೆಳಿಗ್ಗೆ ಭದ್ರಾವತಿ ಪಟ್ಟಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಸುತ್ತಲಿನ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಮಾಹಿತಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ನಾಲ್ಕು ಗಂಟೆಗಳ ವರೆಗೆ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಆಪರೇಷನ್ ಚೀತಾ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆ ವಸತಿ ಗೃಹದಲ್ಲಿದ್ದ ಚಿರತೆಯನ್ನ ಹಿಡಿದು ಬೋನಿಗೆ ಹಾಕಲಾಗಿದೆ. ಭಾರಿ ಪ್ರಯಾಸಪಟ್ಟು ಚಿರತೆಯನ್ನು ಸೆರೆಹಿಡಿಯಲಾಗಿದೆ. ಭಾರೀ ಸಂಖ್ಯೆಯಲ್ಲಿದ್ದ ಜನರನ್ನು ನಿಯಂತ್ರಿಸುವುದೇ ಪೊಲೀಸರಿಗೆ ಸವಾಲಾಗಿತ್ತು. ಬಳಿಕ ಅರವಳಿಕೆ ನೀಡಿ, ಬಲೆ ಹಾಕಿ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ನಲ್ಲಿ ಕೊಂಡೊಯ್ಯುವ ಬಳಿಕ ಜನ ನಿಟ್ಟುಸಿರು ಬಿಟ್ಟಿದ್ದಾರೆ.

Exit mobile version