Thursday, September 18, 2025
HomeUncategorizedದೇವಸ್ಥಾನ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಗೆ ಪಂಗನಾಮ

ದೇವಸ್ಥಾನ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಗೆ ಪಂಗನಾಮ

ಕಲಬುರಗಿ: ದೇವಲಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ದೇಶದ ಮೂಲೆಮೂಲೆಗಳಲ್ಲಿ ಭಕ್ತರಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಗಾಣಗಾಪುರದ ಕೇಲ ಅರ್ಚಕರು ದೇವಸ್ಥಾನ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ದೇವರ ಜೊತೆಗೆ ಭಕ್ತರಿಗೆ ಪಂಗನಾಮ ಹಾಕಿದ್ದಾರೆ.

ದತ್ತಾತ್ರೇಯ ದೇವಸ್ಥಾನಕ್ಕೆ ಕಲಬುರಗಿ ಡಿಸಿ ಯಶವಂತ ಗುರುಕರ್ ಭೇಟಿ ನೀಡಿದ್ದಾಗ ಈ ವಂಚನೆ ಪ್ರಕರಣ ಬಯಲಿಗೆ ಬಂದಿದೆ. ಅಧಿಕೃತ ವೆಬ್‌ಸೈಟ್‌ ಹೊರತುಪಡಿಸಿ ಅರ್ಚಕರೇ ಏಳೆಂಟು ನಕಲಿ ವೆಬ್‌ಸೈಟ್‌ಗಳನ್ನು ಕ್ರಿಯೇಟ್ ಮಾಡಿದ್ದಾರೆ. ದರ್ಶನ, ವಿಶೇಷ ಪೂಜೆ, ಅರ್ಚನೆ ಸೇರಿ ದೂರದ ಊರಿನಲ್ಲಿಯೇ ಕುಳಿತು ಆನ್‌ಲೈನ್ ಬುಕ್ ಮಾಡುವ ವ್ಯವಸ್ಥೆಯನ್ನು ದುರುಪಯೋಗ ಪಡೆಸಿಕೊಂಡಿದ್ದಾರೆ.

ದೇವಸ್ಥಾನಕ್ಕೆ ಸಲ್ಲಿಸುವ ದಾನವನ್ನು ಕೂಡಾ ವಂಚಕರು ತಮ್ಮ ಖಾತೆಗಳಿಗೆ ಹಾಕಿಸಿಕೊಂಡು ಸರ್ಕಾರ ಬೊಕ್ಕಸಕ್ಕೆ ಕೋಟಿ ಕೋಟಿ ವಂಚಿಸಿದ್ದಾರೆ.. ದೇವಸ್ಥಾನದ ಹುಂಡಿ ಎಣಿಕೆ ವೇಳೆಯೂ ಮೋಸ ಮಾಡಿರುವ ಶಂಕೆ ವ್ಯಕ್ತವಾಗಿದೆ.

RELATED ARTICLES
- Advertisment -
Google search engine

Most Popular

Recent Comments