Thursday, September 18, 2025
HomeUncategorizedವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಮಂಡ್ಯ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿದ ಘಟನೆ ಕಾರಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಗರದ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಾರಿಗನಹಳ್ಳಿ ಗ್ರಾಮದ ಮಧು ಎಂಬುವರ ಪತ್ನಿ ಸಹನ(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಆತ್ಮಹತ್ಯೆ ಬಳಿಕ ಪತಿ ಮಧು ಹಾಗೂ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ.

ಅದಲ್ಲದೇ, ಮೃತ ಗೃಹಿಣಿ ಸಹನ ಪೋಷಕರಿಂದ ವರದಕ್ಷಿಣೆ ಕಿರುಕುಳ ದೂರು‌ ನೀಡಿದ್ದು, ಮನೆಯ ಮುಂದೆ ಇದ್ದ ಆರೋಪಿ ಮಧು ಕಾರು ಜಖಂಗೊಳಿಸಿದ್ದಾರೆ. ದೂರು ಪಡೆದು ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular

Recent Comments