Site icon PowerTV

ಭ್ರೂಣಗಳನ್ನ ಎಸೆದಿದ್ದ ಆಸ್ಪತ್ರೆ ಸೀಜ್ ಮಾಡಿದ DHO, ಪೊಲೀಸರು

ಬೆಳಗಾವಿ : ಮೂಡಲಗಿ ಪಟ್ಟಣದಲ್ಲಿ 7ಭ್ರೂಣಗಳ ಪತ್ತೆಯಾದ ಹಿನ್ನಲೆಯಲ್ಲಿ ಮೂಡಲಗಿ ಪಟ್ಟಣದಲ್ಲಿರುವ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಸೀಜ್ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿರುವ ಆಸ್ಪತ್ರೆ. ಮೂರು ವರ್ಷಗಳಿಂದ ಅಬಾಷನ್ ಮಾಡಿದ್ದ ಏಳು ಭ್ರೂಣಗಳು ಪತ್ತೆಯಾಗಿತ್ತು. ಪೊಲೀಸರ ದಾಳಿ ಭೀತಿಯಿಂದ ರಾತ್ರೋರಾತ್ರಿ ಏಳು ಭ್ರೂಣಗಳನ್ನ ಹಳ್ಳಕ್ಕೆ ಎಸೆದ ಸಿಬ್ಬಂದಿ. ಜೂನ್. 23ರಾತ್ರಿ ಐದು ಬಾಟಲ್‌ಗಳಲ್ಲಿ ಏಳು ಭ್ರೂಣ ಸಿಬ್ಬಂದಿ ಹಳ್ಳಕ್ಕೆ ಎಸೆದಿದ್ದಾರೆ.

ಇನ್ನು, ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಬಯಲಾಗಿದ್ದು, ತಮ್ಮದೇ ಆಸ್ಪತ್ರೆ ಭ್ರೂಣಗಳು ಅಂತಾ ತಪ್ಪೊಪ್ಪಿಕೊಂಡ ವೆಂಕಟೇಶ ಆಸ್ಪತ್ರೆ ಆಡಳಿತ ಮಂಡಳಿ.ನಿಯಮ ಗಾಳಿಗೆ ತೂರಿ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಲಿಂಗ ಪತ್ತೆ ಹಚ್ಚುತ್ತಿದ್ರಾ ಆಸ್ಪತ್ರೆಯವರು? ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ವಿಚಾರ ಗೊತ್ತಿದ್ರೂ ಸುಮ್ಮನೆ ಕುಳಿತ್ರಾ ಅನ್ನೋ ಆರೋಪ ಕೇಳಿಬರುತ್ತಿದೆ.

Exit mobile version