Wednesday, September 17, 2025
HomeUncategorizedಬಿಜೆಪಿ ಸರ್ಕಾರದ ವಿರುದ್ಧ ಹೆಚ್​ಡಿಕೆ ಟ್ವೀಟ್​

ಬಿಜೆಪಿ ಸರ್ಕಾರದ ವಿರುದ್ಧ ಹೆಚ್​ಡಿಕೆ ಟ್ವೀಟ್​

ಬೆಂಗಳೂರು: ವಾರ್ಡ್‌ ವಿಂಗಡಣೆ ಸ್ವರೂಪ ನೋಡಿದರೆ ಬಿಜೆಪಿಯ ‘ಅಧಿಕಾರದ ವಿಕೃತಿ’ ಯಾವ ಮಟ್ಟದಲ್ಲಿದೆ ಎನ್ನುವುದು ಅರ್ಥವಾಗುತ್ತದೆ ಎಂದು ಹೇಳಿದರು.

ಪಾಲಿಕೆಯನ್ನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಾಗಿ ಮಾಡಿದ್ದು ನಾನು. ಬಿಬಿಎಂಪಿ ರಚನೆಯ ಮೂಲ ಆಶಯವನ್ನೇ ಬಿಜೆಪಿ ಬುಡಮೇಲು ಮಾಡಿದೆ. ರಾಜಕೀಯ ಸ್ವಾರ್ಥ ಸಾಧನೆಯ ಷಡ್ಯಂತ್ರ ನಡೆಸಿದೆ. ಬಿಜೆಪಿ ಅಧಿಕಾರದ ಪಿಪಾಸು. ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ. ತನ್ನ ಕೆಟ್ಟ ಆಡಳಿತಕ್ಕೆ ಬೇಸತ್ತು ಬೆಂಗಳೂರಿಗರು ಬೇರೆ ಪಕ್ಷಕ್ಕೆ ಮತ ಹಾಕ್ತಾರೆ. ಹೀಗಾಗಿ ಬಿಬಿಎಂಪಿ ಚುನಾವಣೆಯನ್ನೇ ನಡೆಸಲಿಲ್ಲ. ಕೋರ್ಟ್‌ ಚಾಟಿ ಬೀಸಿದ ಮೇಲೆ ಚುನಾವಣೆ ಎನ್ನುತ್ತಿದ್ದಾರೆ. ಈಗ ವಾರ್ಡ್‌ ವಿಂಗಡಣೆಯ ನಾಟಕವಾಡುತ್ತಿದ್ದಾರೆ ಎಂದರು.

ಇನ್ನು, ಕೋರ್ಟ್ ಆದೇಶವನ್ನೇ ಧಿಕ್ಕರಿಸಿ ನಡೆದ ನಿರ್ಲಜ್ಜ ಸರಕಾರ. ಬಿಜೆಪಿಗೆ ಜನಹಿತಕ್ಕಿಂತ ಪಕ್ಷಹಿತವೇ ಸರ್ವಸ್ವ. ವಾರ್ಡ್‌ ವಿಂಗಡಣೆ ಸ್ವರೂಪ ನೋಡಿದರೆ ಬಿಜೆಪಿಯ ‘ಅಧಿಕಾರದ ವಿಕೃತಿ’ ಯಾವ ಮಟ್ಟದಲ್ಲಿದೆ ಎನ್ನುವುದು ಅರ್ಥವಾಗುತ್ತದೆ. ವಾರ್ಡ್ ವಿಂಗಡಣೆಯಲ್ಲಿ ಬೆಂಗಳೂರು ನಗರದ ಸಮಗ್ರತೆ, ಅನನ್ಯತೆಯನ್ನು ಕಡೆಗಣಿಸಲಾಗಿದೆ. ಬೆಂಗಳೂರು ಎಂದರೆ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳು ಮಾತ್ರವಲ್ಲ. ಇದು ಕೇವಲ ಬಿಜೆಪಿಯಿಂದ, ಬಿಜೆಪಿ ಶಾಸಕರಿಗಾಗಿ, ಬಿಜೆಪಿಯೇ ಮಾಡಿಕೊಂಡ ಮರು ವಿಂಗಡಣೆ. ಐತಿಹಾಸಿಕ ವಾರ್ಡುಗಳ ಹೆಸರುಗಳನ್ನು ಬದಲಿಸಿದ್ದಾರೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಚರಿತ್ರೆಯ ಕುರುಹುಗಳನ್ನು ಅಳಿಸಿ ಹಾಕಿದ್ದಾರೆ ಎಂದು ಹೇಳಿದರು.

ಅದಲ್ಲದೇ, ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ರಾಷ್ಟ್ರಪತಿಗಳು ಮತ್ತು ಪ್ರಧಾನಿ ಆಗಾಗ್ಗೆ ನಗರಕ್ಕೆ ಭೇಟಿ ನೀಡುತ್ತಿರಬೇಕು” ಹೈಕೋರ್ಟ್‌ ಛೀಮಾರಿ ಹಾಕಿದೆ. “ಮೊನ್ನೆಯಷ್ಟೇ ಪ್ರಧಾನಿ ಬಂದು ಹೋಗಿದ್ದಾರೆ. ಅದಕ್ಕಾಗಿ 23 ಕೋಟಿ ಖರ್ಚು ಮಾಡಿ ನಗರದ ರಸ್ತೆ ಗುಂಡಿ ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ರಸ್ತೆಗಳನ್ನು ಸರಿಪಡಿಸಬಹುದು. ಇನ್ನು, ಪ್ರಧಾನಿಗಳಿಗಾಗಿ ಸಿದ್ಧಪಡಿಸಿದ ರಸ್ತೆಯೇ ಕುಸಿದುಬಿದ್ದಿದೆ. 40% ಕಮಿಷನ್‌ & ಕಳಪೆ ಕಾಮಗಾರಿಯ ಫಲಶ್ರುತಿ ಇದು, ದೇಶದ ಪ್ರಧಾನಿಯೇ ಸಂಚರಿಸಿದ ರಸ್ತೆಯೇ ಕಳಪೆ ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ? ಐಟಿ ಸಿಟಿಯ ಸ್ಥಿತಿ ಅಯ್ಯೋ ಎನ್ನುವಂತಿದೆ ಎಂದು ಟ್ವೀಟ್​ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments