Site icon PowerTV

ಪ್ರಿಯತಮೆ ಕೈಕೊಟ್ಟಳೆಂದು ಮನನೊಂದ ಯುವಕ : ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ

ಶಿವಮೊಗ್ಗ: ಪರಸ್ಪರ ಪ್ರೀತಿಸಿ, ಪೋಷಕರ ಒತ್ತಡಕ್ಕೆ ಮಣಿದು ಕಳೆದೊಂದು ತಿಂಗಳ ಹಿಂದೆ ತವರಿಗೆ ಮರಳಿದ್ದ ಯುವತಿ, ಪ್ರಿಯಕರನಿಂದ ಅಂತರ ಕಾಯ್ದುಕೊಂಡಿದ ಹಿನ್ನೆಲೆಯಲ್ಲಿ ಮನನೊಂದ ಯುವಕನೋರ್ವ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಸೊರಬ ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರಿನ ಗಾರ್ಮೆಂಟ್ಸ್‌ವೊಂದರಲ್ಲಿ ಅಸಿಸ್ಟೆಂಟ್ ಕ್ವಾಲಿಟಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ ದಿಲೀಪ್ ಆತ್ಮಹತ್ಯೆಗೆ ಶರಣಾದ ಪ್ರಿಯಕರ ದಿಲೀಪ್‌ ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆಯವನಾಗಿದ್ದು, ಅದೇ ಗಾರ್ಮೆಟ್ಸ್‌ನಲ್ಲಿ ಕೆಲಸ ಮಾಡ್ತಿದ್ದ ಯುವತಿ ಜೊತೆಗೆ ಪ್ರೀತಿಸುತ್ತಿದ್ದ. ಇಬ್ಬರ ಮದುವೆಗೆ ಮನೆಯವರು ಒಪ್ಪದ ಹಿನ್ನೆಲೆ ಆತ್ಮಹತ್ಯೆೆಗೆ ಕಾರಣ ಎನ್ನಲಾಗಿದೆ.

ಹೀಗಾಗಿ ಯುವತಿ ವಾಸವಿರುವ ಸೊರಬ ತಾಲ್ಲೂಕಿನ ಬೆಟ್ಟದಕೂರ್ಲಿ ಗ್ರಾಮಕ್ಕೆ ತೆರಳಿ, ಅಲ್ಲಿನ ಕೆರೆ ಏರಿ ಮೇಲೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸದ್ಯ ಯುವಕ ರೆಕಾರ್ಡ್ ಮಾಡಿರುವ ಸೆಲ್ಫಿ ವಿಡಿಯೋ ವೈರಲ್ ಆಗಿದ್ದು, ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version