Sunday, August 24, 2025
Google search engine
HomeUncategorizedದನ ಮೇಯಿಸುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ : ಆರೋಪಿ ಬಂಧನ

ದನ ಮೇಯಿಸುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ : ಆರೋಪಿ ಬಂಧನ

ತುಮಕೂರು : ದನ ಮೇಯಿಸುತ್ತಿದ್ದ ಮಹಿಳೆಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ದುರ್ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ದೊಡ್ಡಕಲ್ಲಹಳ್ಳಿಯಲ್ಲಿ ನಡೆದಿದೆ.

24 ವರ್ಷದ ಮಹಿಳೆ ನಿನ್ನೆ ತಮ್ಮ ಹೊಲದಲ್ಲಿ ದನ ಮೇಯಿಸುತ್ತಿದ್ದರು. ಈ ವೇಳೆ ಮಹಿಳೆಯನ್ನ ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಆರೋಪಿ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿದ್ದಾನೆ.

ರಾಮಕೃಷ್ಣ ಬಂಧಿತ ಕಾಮುಕ. ಸಂತ್ರಸ್ತ ಮಹಿಳೆ ಎಂದಿನಂತೆ ತನ್ನ ಗ್ರಾಮದ ಹೊರ ವಲಯದ ಬಯಲಿನಲ್ಲಿ ದನ ಮೇಯಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ರಾಮಕೃಷ್ಣಯ್ಯ ಸಂತ್ರಸ್ತ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಹೆಗಲ ಮೇಲೆ ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಸಂತ್ರಸ್ತ ಘಟನೆ ಬಗ್ಗೆ ಊರಿನ ಗ್ರಾಮಸ್ಥರೊಬ್ಬರಿಗೆ ಮಾಹಿತಿ ನೀಡಿದ್ದಾಳೆ.

ಬಳಿಕ ಹುಲಿಯೂರುದುರ್ಗ ಪೊಲೀಸ್​​ ಠಾಣೆಯಲ್ಲಿ ಮಹಿಳೆ ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಎರಡನೇ ಕೃತ್ಯ: ಈ ಹಿಂದೆ 2016 ರಲ್ಲಿ ಗ್ರಾಮದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಸಂಬಂಧಿಸಿದಂತೆ ಹುಲಿಯೂರುದುರ್ಗ ಠಾಣೆಯಲ್ಲಿ ರಾಮಕೃಷ್ಣಯ್ಯನ ವಿರುದ್ದ ಪ್ರಕರಣ ದಾಖಲಾಗಿತ್ತು.

RELATED ARTICLES
- Advertisment -
Google search engine

Most Popular

Recent Comments