Site icon PowerTV

ಹೆದ್ದಾರಿಗೆ ಮುಳ್ಳಿನ ಬೇಲಿ ಹಾಕಿ ವಿದ್ಯಾಥಿ೯ಗಳು ಪ್ರತಿಭಟನೆ

ಬಾಗಲಕೋಟೆ : ಶಾಲಾ ಕಾಲೇಜು ವಿದ್ಯಾಥಿ೯ಗಳಿಂದ ಹೆದ್ದಾರಿಗೆ ಮುಳ್ಳಿನ ಬೇಲಿ ಹಾಕಿ ರಸ್ತೆ ಮಧ್ಯೆ ಕುಳಿತು ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿರುವ ಘಟನೆ  ಬಾಗಲಕೋಟೆ ಜಿಲ್ಲೆಯ ಬೇವಿನಮಟ್ಟಿ ಗ್ರಾಮದಲ್ಲಿ ನಡೆದಿದೆ.

ಬಸ್ ನಿಲುಗಡೆಗೆ ಆಗ್ರಹಿಸಿ ಬೆಳಗಾವಿ- ರಾಯಚೂರು ರಾಜ್ಯ ಹೆದ್ದಾರಿ ತಡೆದು ಶಾಲಾ ಕಾಲೇಜು ವಿದ್ಯಾಥಿ೯ಗಳು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಾಗಕೋಟೆಯ ಬೇವಿನಮಟ್ಟಿಗೆ ಲೋಕಲ್ ಬಸ್ ಸೇರಿದಂತೆ ಉಳಿದ ಬಸ್​ಗಳು ನಿಲುಗಡೆ ಮಾಡುತ್ತಿಲ್ಲವೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹೀಗಾಗಿ ನಿತ್ಯ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಇದರಿಂದ ಕೆಲಕಾಲ ಸಂಚಾರ ಸ್ಥಗಿತವಾಗಿ, ಪ್ರಯಾಣಿಕರು ಪರದಾಡುವಂತಾಗಿದೆ. ಇನ್ನು ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಬಸ್ ನಿಲುಗಡೆ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.

Exit mobile version