Site icon PowerTV

ಯದುವೀರ್ ಒಡೆಯರ್ ಕುಟುಂಬ ಅಂಜನಾದ್ರಿಗೆ ಭೇಟಿ

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದಾ ದೇವಿ ಅವರು ಇಂದು ಕಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.

ಇತ್ತೀಚೆಗೆ ಕೆಲ ವೈಯಕ್ತಿಕ ಕಾರ್ಯಕ್ರಮಗಳ ನಿಮಿತ್ತ ಹಂಪಿಗೆ ಆಗಮಿಸಿದ್ದರು. ಇದೇ ಸಮಯದಲ್ಲಿ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿ 545 ಮೆಟ್ಟಿಲುಗಳನ್ನು ಹತ್ತಿ ದರ್ಶನ ಪಡೆದರು. ನಂತರ ಅರ್ಚಕರಿಂದ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ದೇವಸ್ಥಾನದ ವ್ಯವಸ್ಥಾಪಕ ವೆಂಕಟೇಶ ಮಡಿವಾಳ, ಪೊಲೀಸ್ ಸಿಬ್ಬಂದಿ ಶ್ರೀನಿವಾಸ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಇದ್ದರು‌.

ಬಳಿಕ ಮಾತನಾಡಿದ ಅವರು, ನಾನು ಹನುಮ ಹುಟ್ಟಿದ ಸ್ಥಳಕ್ಕೆ ಎರಡನೇ ಬಾರಿ ಬರುತ್ತಿದ್ದೇನೆ. ಎಲ್ಲರಿಗೂ ಒಳ್ಳೆದಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ. ಇದೊಂದು ಅದ್ಭುತ ಜಾಗ ಎಂದರು.

Exit mobile version