Site icon PowerTV

ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆ ಆಗ್ಬೇಕು : ಸಿದ್ದರಾಮಯ್ಯ

ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ವ್ಯಕ್ತಿಯ ಶಿರಚ್ಛೇದನವನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘ಉದಯಪುರದಲ್ಲಿ ಅಮಾಯಕನ ಶಿರಚ್ಛೇದ ಮಾಡಿದ ಬರ್ಬರ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.ಅಂತಹ ಕ್ರೌರ್ಯವನ್ನು ಸಮರ್ಥಿಸಲು ಸಾಧ್ಯವಿಲ್ಲ. ಅಪರಾಧಿಗಳಿಗೆ ಶಿಕ್ಷೆಯಾಗಬೇಕು’ ಎಂದು ಹೇಳಿದ್ದಾರೆ. ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ. ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಅಲ್ಲಿನ ರಾಜ್ಯ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದಾರೆ.

Exit mobile version