Site icon PowerTV

ಟೈಲರ್‌ ಕನ್ಹಯ್ಯ ಹತ್ಯೆ : 1 ತಿಂಗಳು ರಾಜಸ್ಥಾನದಲ್ಲಿ 144 ಸೆಕ್ಷನ್‌ ಜಾರಿ

ರಾಜಸ್ತಾನ : ಉದಯಪುರದಲ್ಲಿ ಟೈಲರ್‌ ಕನ್ಹಯ್ಯ ಎಂಬ ವ್ಯಕ್ತಿಯ ಕತ್ತು ಸೀಳಿ ಹತ್ಯೆ ಮಾಡಿರುವುದು, ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಎಲ್ಲಾ ಜಿಲ್ಲೆಗಳಲ್ಲಿ ಒಂದು ತಿಂಗಳು, CRPC ಸೆಕ್ಷನ್‌ 144 ಜಾರಿ ಮಾಡಲಾಗಿದೆ.

ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ. ಎಸ್‌ಐಟಿಯಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ, ವಿಶೇಷ ಕಾರ್ಯಾಚರಣೆ ತಂಡದ ಅಶೋಕ್ ಕುಮಾರ್ ರಾಥೋಡ್, ಪೊಲೀಸ್ ಮಹಾನಿರೀಕ್ಷಕ ಭಯೋತ್ಪಾದನಾ ನಿಗ್ರಹ ದಳ, ಪ್ರಫುಲ್ಲ ಕುಮಾರ್ ಮತ್ತು ಪೊಲೀಸ್ ಅಧೀಕ್ಷಕ ಶ್ರೇಣಿಯ ಅಧಿಕಾರಿ, ಮತ್ತು ಹೆಚ್ಚುವರಿ ಎಸ್ಪಿ ಶ್ರೇಣಿಯ ಅಧಿಕಾರಿ ಇದ್ದಾರೆ.

ಪ್ರಕರಣ ಬೆಳಕಿಗೆ ಬಂದ ನಂತರ ಮಂಗಳವಾರ ಇಡೀ ರಾಜ್ಯದಲ್ಲಿ, ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಯಿತು. ಜನರು ಶಾಂತಿ ಕಾಪಾಡುವಂತೆ ಉದಯಪುರ ವಿಭಾಗೀಯ ಆಯುಕ್ತ, ರಾಜೇಂದ್ರ ಭಟ್ ಮನವಿ ಮಾಡಿದ್ದಾರೆ.ಉದಯಪುರದ ಜನರಿಗೆ ಶಾಂತಿ ಕಾಪಾಡುವಂತೆ, ನಾವು ಮನವಿ ಮಾಡುತ್ತೇವೆ. ಕನ್ಹಯ್ಯಾ ಲಾಲ್ ಅವಲಂಬಿತರನ್ನು ಯುಐಟಿಯಲ್ಲಿ ಪ್ಲೇಸ್‌ಮೆಂಟ್ ಸೇವೆಯ ಮೂಲಕ, ನೇಮಕಾತಿ ಮಾಡಿಕೊಳ್ಳುವುದಾಗಿ ಭರವಸೆ ನೀಡಲಾಗಿದೆ.

Exit mobile version