Site icon PowerTV

ಆಕಸ್ಮಿಕ ಬೆಂಕಿ ಅವಘಡ: 40 ಕುರಿಗಳು ಭಸ್ಮ

ಚಾಮರಾಜನಗರ: ಆಕಸ್ಮಿಕ ಬೆಂಕಿ ತಗುಲಿ 40 ಕ್ಕೂ ಹೆಚ್ಚು ಕುರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಕೋಡಿಉಗನೆ ಗ್ರಾಮದಲ್ಲಿ ನಡೆದಿದೆ.

ಕೋಡಿಉಗನೆ ಗ್ರಾಮದ ಮಹಾದೇವ ಎಂಬವರ ಕುರಿದೊಡ್ಡಿಗೆ ಆಕಸ್ಮಿಕ ಬೆಂಕಿ ತಗುಲಿ ದೊಡ್ಡಿಯಲ್ಲಿದ್ದ 40ಕ್ಕೂ ಹೆಚ್ಚು ಕುರಿಗಳು ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾಗಿದೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಇನ್ನು, ಬೆಂಕಿ ಅವಘಡ ಉಂಟಾಗುತ್ತಿದ್ದಂತೆ ಎಚ್ಚೆತ್ತ ಮಹಾದೇವ ಹಾಗೂ ನೆರೆಹೊರೆಯವರು ಅಗ್ನಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ.

ಸದ್ಯ ಈ ಘಟನೆಯು ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Exit mobile version