Site icon PowerTV

ಹುಲಿ ದಾಳಿ ರೈತನಿಗೆ ಗಂಭೀರ ಗಾಯ

ಚಾಮರಾಜನಗರ : ಹುಲಿ ದಾಳಿಯಿಂದ ರೈತನಿಗೆ ಗಂಭೀರ ಗಾಯಗಳಾದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಲಕ್ಕಿಪುರದಲ್ಲಿ ನಡೆದಿದೆ.

ಗಡಿ ಜಿಲ್ಲೆಯಲ್ಲಿ ವ್ಯಾಘ್ರ ಭೀತಿ ಮತ್ತೇ ಆತಂಕ ಶುರುವಾಗಿದ್ದು, ‌ ಗೋಪಾಲಪುರ ಗ್ರಾಮದ ಗವಿಯಪ್ಪ(45) ಎಂಬ ರೈತ ಮೇಲೆ ಹುಲಿ ದಾಳಿ ಮಾಡಿದೆ. ಗವಿಯಪ್ಪ ಎಂದಿನಂತೆ ಜಮೀನಿಗೆ ತೆರಳಿ ಕೆಲಸ ಮಾಡುತ್ತಿದ್ದ ವೇಳೆ ಕಣ್ಣು, ಕಿವಿ ಹಾಗೂ ಬೆನ್ನಿನ ಭಾಗಕ್ಕೆ ತೀವ್ರತರವಾದ ಗಾಯ ಮಾಡಿದೆ.

ಇನ್ನು, ರೈತ ಕೂಗಿಕೊಂಡ ಹಿನ್ನಲೆ ಸುತ್ತಮುತ್ತಲ ಜಮೀನಿನ ರೈತರು ಚೀರಾಡಿಕೊಂಡು ಧಾವಿಸಿದಾಗ ಹುಲಿ ಪರಾರಿಯಾಗಿದ್ದು, ಪಕ್ಕದ ಜಮೀನಿನ ಪೊದೆಯಲ್ಲಿ ಅರಿತು ಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಬಂಡೀಪುರ ವ್ಯಾಪ್ತಿಯ ಗೋಪಾಲಸ್ವಾಮಿ ಬೆಟ್ಟ ವಲಯದ ಅರಣ್ಯಾಧಿಕಾರಿ ನವೀನ್ ಕುಮಾರ್ ಭೇಟಿ ನೀಡಿದ್ದಾರೆ.

Exit mobile version