ಮಂಗಳೂರು : ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 7ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.
ಕರಾವಳಿಯಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯ ಮುನ್ಸೂಚನೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 7ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.
ಸತತ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ಶಾಲೆಗೆ ರಜೆ ನೀಡಲಾಗಿದೆ. ನಿರಂತರ ಮಳೆಯಿಂದಾಗಿ ಕರಾವಳಿಯಲ್ಲಿ ಜನಜೀವನ ತತ್ತರಿಸಿ ಹೋಗಿದ್ದು, ಆಗಿಂದಾಗ್ಗೆ ಸುರಿಯುತ್ತಿರುವ ಭಾರೀ ಮಳೆಗೆ ಹಲವೆಡೆ ಗುಡ್ಡ ಕುಸಿತ, ರಸ್ತೆ ಬ್ಲಾಕ್ ಆಗಿದೆ.


