Site icon PowerTV

ಕಾಂಗ್ರೆಸ್​​​ನವರು ಭಿಕ್ಷೆ ಬೇಡಿ ಬಟ್ಟೆಗಳನ್ನು ಕೊಡ್ತಾರೆ : ಡಿಕೆ ಶಿವಕುಮಾರ್​​

ಬೆಂಗಳೂರು : ಪ್ರತಿಯೊಬ್ಬ ಪೋಷಕರು ಮಕ್ಕಳಿಗೆ ಬಟ್ಟೆಗಳನ್ನು ಕೊಡಿಸಲು, ಒಳ್ಳೆಯ ಶಾಲೆಯಲ್ಲಿ ಓದಿಸಲು ದುಡಿತಯುತ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳ್ಳಿ ಶಾಲೆಯಲ್ಲಿ ದೊಡ್ಡ ಸ್ಥಾನಕ್ಕೆ ಹೋಗಿದ್ದಾರೆ. ಅದಕ್ಕೆ ಸರ್ಕಾರವೂ ಸಹ ಶೂ, ಬಟ್ಟೆಗಳನ್ನು ಕೊಡುವ ಕಾರ್ಯಕ್ರಮ ಮಾಡಿದೆ. ಆದರೆ ಶಿಕ್ಷಣ ಸಚಿವರು ಇದಕ್ಕೆ ವಿರುದ್ಧ ಹೇಳಿಕೆ ನೀಡಿದ್ದಾರೆ. ಇವರು ಯಾಕೆ ಬಟ್ಟೆಗಳನ್ನು ಹಾಕ್ತಾರೆ..? ಇವರು ಬನಿಯನ್, ಚಡ್ಡಿ ಹಾಕಿಕೊಂಡು ವಿಧಾನಸೌಧಕ್ಕೆ ಬರಲಿ ಎಂದರು.

ಇನ್ನು, ಸಚಿವರ ಹೇಳಿಕೆ ಅಗೌರವದಿಂದ ಕೂಡಿದೆ. ನಾನು ಸಿಎಂ ಮತ್ತು ಸಚಿವರಿಗೆ ಹೇಳ್ತೇನೆ. ನಿಮ್ಮ ಬಳಿ ಹಣ ಇಲ್ಲದಿದ್ದರೆ ಹೇಳಿ. ಕಾಂಗ್ರೆಸ್ ನವರು ಭಿಕ್ಷೆ ಬೇಡಿ ಬಟ್ಟೆಗಳನ್ನು ಕೊಡ್ತಾರೆ. ನೊಂದ‌ ಮಕ್ಕಳ, ಪೋಷಕರ ಗೌರವ ಕಾಪಾಡಲು ಕಾಂಗ್ರೆಸ್ ಬದ್ಧವಾಗಿದೆ. ಇದು ರಾಜ್ಯದ ಎಲ್ಲಾ‌ಮಕ್ಕಳ ಸ್ವಾಭಿಮಾನದ ವಿಚಾರ. ನಮ್ಮ ಮಕ್ಕಳ ಬದುಕಿನ ವಿಚಾರ. ನೀವು ಮಕ್ಕಳನ್ನು ಅಗೌರವದಿಂದ ಕಾಣ್ತಾ ಇದ್ದೀರಾ ಎಂದು ಪ್ರಶ್ನಿಸಿದರು.

ಅದಲ್ಲದೇ, ಸರ್ಕಾರ ಮೊದಲಿನಿಂದಲೂ ಶಾಲಾ ಮಕ್ಕಳಿಗೆ ಬಟ್ಟೆ, ಶೂ, ಸಾಕ್ಸ್ ಕೊಡ್ತಾ ಬಂದಿದ್ದೇವೆ. ಕಾಂಗ್ರೆಸ್ ನಿಂದ ಒಂದು ಕಾರ್ಯಕ್ರಮ ಹಾಕಿಕೊಳ್ಳುತ್ತೇವೆ. ಎಲ್ಲಾ ತಾಲ್ಲೂಕು ಜಿಲ್ಲೆಯಲ್ಲಿ ಭಿಕ್ಷೆ ಎತ್ತಿ, ಮಕ್ಕಳಿಗೆ ಬಟ್ಟೆಗಳನ್ನು ಕೊಡ್ತೇವೆ. ಕಾರ್ಯಕರ್ತರಿಗೆ ನಾವು ಹೇಳ್ತೇವೆ . ಎಲ್ಲಾ ಮಕ್ಕಳಿಗೆ ಬಟ್ಟೆಗಳನ್ನು ಕೊಡಲು, ಶೂ, ಸಾಕ್ಸ್ ಕೊಡಲು ಎಂದರು.

Exit mobile version