Site icon PowerTV

KRS ಜಲಾಶಯ ಭರ್ತಿಗೆ 5 ಅಡಿ ಮಾತ್ರ ಬಾಕಿ

ಕಾವೇರಿ : ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ(ಕೆಆರ್‌ಎಸ್‌) ಜಲಾಶಯ ಭರ್ತಿಗೆ 5 ಅಡಿ ಮಾತ್ರ ಬಾಕಿಯಿದೆ. ಒಳ ಹರಿವು ಪ್ರಮಾಣ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಇದೇ ರೀತಿ ಮುಂದುವರಿದರೆ ಮೂರು ದಿನದಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆಯಿದೆ.

ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು ಈಗಾಗಲೇ 119.44 ಅಡಿ ನೀರು ಸಂಗ್ರಹಗೊಂಡಿದೆ. ಒಳಹರಿವಿನ ಪ್ರಮಾಣ 38,858 ಕ್ಯೂಸೆಕ್‌ಗೆ ಏರಿಕೆಯಾಗಿದ್ದು 3,453 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. 49.452 ಟಿಎಂಸಿ ಸಾಮರ್ಥ್ಯ ಹೊಂದಿರುವ ಜಲಾಶಯಲ್ಲಿ 42.341 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.
ಯಾವುದೇ‌ ಕ್ಷಣದಲ್ಲಿ ಡ್ಯಾಂನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆಯಿದೆ. ನದಿ ಪಾತ್ರದ ಜನರು ತಮ್ಮ ಆಸ್ತಿ ಪಾಸ್ತಿ ರಕ್ಷಣೆ ಮಾಡಿಕೊಳ್ಳುವಂತೆ ಕಾವೇರಿ ನೀರಾವರಿ ನಿಗಮ ಸೂಚನೆ ನೀಡಿದೆ.

Exit mobile version