Site icon PowerTV

ನಟ ವಿಕ್ರಮ್‌ಗೆ ಹೃದಯಾಘಾತವಾಗಿಲ್ಲ, ಸಣ್ಣ ಪ್ರಮಾಣದ ಎದೆ ನೋವು: ಪುತ್ರ ಧ್ರುವ

ಚೆನ್ನೈ: ತಮಿಳಿನ ಖ್ಯಾತ ನಟ ವಿಕ್ರಮ್ ಅವರಿಗೆ ಸಣ್ಣ ಪ್ರಮಾಣದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು, ಅವರಿಗೆ ಹೃದಯಾಘಾತವಾಗಿಲ್ಲ ಎಂದು ಅವರ ಪುತ್ರ ಧ್ರುವ ವಿಕ್ರಮ್​​ ಅವರು ಸ್ಪಷ್ಟನೆ ನೀಡಿದ್ದಾರೆ.

ನಟ ವಿಕ್ರಮ್‌ ‘ಪೊನ್ನಿಯಿನ್ ಸೆಲ್ವನ್’ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೆಲ ಸಮಯದ ಬಳಿಕ ಅನಾರೋಗ್ಯದಿಂದ ಇಲ್ಲಿನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.

ವಿಕ್ರಮ್‌ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು ಹಾಗೂ ಸಣ್ಣ ಪ್ರಮಾಣದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಆದರೆ, ಅವರಿಗೆ ಹೃದಯಾಘಾತವಾಗಿದೆ ಎಂದು ಕೆಲ ಮಾಧ್ಯಮಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಸುಳ್ಳು ಎಂದು ವಿಕ್ರಮ್‌ ಪುತ್ರ ಧ್ರುವ ಸ್ಪಷ್ಟಪಡಿಸಿದ್ದಾರೆ.

Exit mobile version