Site icon PowerTV

ಅಮರನಾಥ ಮೇಘ ಸ್ಫೋಟ: 40 ಮಂದಿ ನಾಪತ್ತೆ ;22 ಮಂದಿ ಮೃತ

ಶ್ರೀನಗರ: ದಕ್ಷಿಣ ಕಾಶ್ಮೀರದ ಹಿಮಾಲಯದ ತಪ್ಪಲಿನ ಪ್ರಸಿದ್ಧ ಯಾತ್ರಾಸ್ಥಳ ಅಮರನಾಥದಲ್ಲಿ ಮೇಘ ಸ್ಫೋಟವಾಗಿದ್ದು, ಕನಿಷ್ಠ 22 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಈ ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 15 ಸಾವಿರ ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ಅಧಿಕಾರಿಗಳು ಹೇಳಿದ್ದಾರೆ.
ಮೇಘಸ್ಫೋಟದ ಬಳಿಕ ಭಾರಿ ಮಳೆ ಸುರಿದಿದೆ. ಮಳೆಯಿಂದಾಗಿ ಪ್ರವಾಹದಂತಹ ಸ್ಥಿತಿ ನಿರ್ಮಾಣವಾಗಿದೆ.

ವೇಗವಾಗಿ ನುಗ್ಗಿದ ನೀರಿನಿಂದಾಗಿ ಡೇರೆಗಳು ಕೊಚ್ಚಿ ಹೋಗಿವೆ. ಸುಮಾರು 35ಕ್ಕೂ ಹೆಚ್ಚು ಡೇರೆಗಳು ನಾಶವಾಗಿವೆ. ಮೂರು ಸಾಮೂಹಿಕ ಭೋಜನಗೃಹಗಳಿಗೆ ಹಾನಿಯಾಗಿದೆ. ಸುಮಾರು 17 ಸಾವಿರಕ್ಕೂ ಹೆಚ್ಚು ಯಾತ್ರಿಕರು ಆಗಮಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಮನೋಜ್ ಸಿನ್ಹಾ ಅವರ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ತ್ವರಿತ ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ಕೇಂದ್ರ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆಯ ಸಿಬ್ಬಂದಿಯನ್ನು ಕಳುಹಿಸಲಾಗಿದೆ ಎಂದು ಶಾ ಅವರು ಟ್ವೀಟ್‌ ಮಾಡಿದ್ದಾರೆ.

Exit mobile version