Site icon PowerTV

ಇನ್ನೂ ಮೂರು ದಿನ ಮಳೆ : ಹವಮಾನ ಇಲಾಖೆ ಸೂಚನೆ

ಬೆಂಗಳೂರು : ರಾಜ್ಯಾದ್ಯಂತ ಮುಂದಿನ 3 ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನುಳಿದಂತೆ, ಬೆಂಗಳೂರಿನಲ್ಲಿ ಗಾಳಿ ಹಾಗೂ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.

Exit mobile version